SUDDILIVE || SHIVAMOGGA
ಶಿಕಾರಿಪುರದಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 658 ಗ್ರಾಂ ಗಾಂಜಾ ವಶ- Marijuana sale in Shikaripura: Two arrested, 658 grams of marijuana seized
ಶಿಕಾರಿಪುರ, ಜೂನ್ 19: ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಯಾತ್ರೀ ನಿವಾಸಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ 658 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 17ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶರತ್ ಹೆಚ್ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆಸಿತು. ಈ ವೇಳೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಸುನೀಲ್ ನಾಯ್ಕ (32) ಹಾಗೂ ಸುನೀಲ್ ಟಿ.ವಿ. (30) ಎಂಬ ಆರೋಪಿಗಳನ್ನು ಬಂಧಿಸಲಾಯಿತು.
ಬಂಧಿತರಿಂದ ಸುಮಾರು ₹15,000 ಮೌಲ್ಯದ 658 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0096/2026 ದಾಖಲಿಸಲಾಗಿದ್ದು, ಮಾದಕ ದ್ರವ್ಯ ಮತ್ತು ಮನೋವಿಕೃತ ಔಷಧಗಳ ಕಾಯ್ದೆ (NDPS Act) 1985ರ ಕಲಂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
Marijuana sale in Shikaripura: Two arrested, 658 grams of marijuana seized
