SUDDILIVE || SHIVAMOGGA
ಶಿವಮೊಗ್ಗದಲ್ಲಿ ಗಾಂಜಾ ಮಾರಾಟ: 1.32 ಕೆಜಿ ಗಾಂಜಾ ಜಪ್ತಿ, ಓರ್ವ ಬಂಧನ-Marijuana sale in Shivamogga: 1.32 kg of marijuana seized, one arrested
ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಸುಮಾರು 1 ಕೆಜಿ 320 ಗ್ರಾಂ ತೂಕದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಜೂನ್ 24ರಂದು ಸಂಜೆ ದೊರೆತ ಖಚಿತ ಮಾಹಿತಿಯ ಮೇರೆಗೆ, ತೀರ್ಥಹಳ್ಳಿ ರಸ್ತೆಯಲ್ಲಿರುವ ಪಲಕ್ ಶಾದಿ ಮಹಲ್ ಹಿಂಭಾಗದ ಖಾಲಿ ಜಾಗದಲ್ಲಿ ಪೊಲೀಸರು ದಾಳಿ ನಡೆಸಿದರು. ಪಿಎಸ್‌ಐ ನಾರಾಯಣ ಮಧುಗಿರಿ ಅವರ ನೇತೃತ್ವದಲ್ಲಿ ಎಎಸ್‌ಐ ಚೂಡಾಮಣಿ ಸೇರಿದಂತೆ ಸಂದೀಪ್,ಮನೋಹರ, ಗುರುನಾಯ್ಕ್ ಮಲ್ಲಾನಾಯ್ಕ್, ಸಿಬ್ಬಂದಿಗಳಾದ ಹಾಗೂ ಪಂಚರ ಸಮ್ಮುಖದಲ್ಲಿ ಸಂಜೆ 6ರಿಂದ 7 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿದರು.
ದಾಳಿಯ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಕ್ಮಲ್ ಖಾನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆತ ಸಾಗರ ಪಟ್ಟಣದ ಎಸ್.ಎನ್. ನಗರದ ನಿವಾಸಿಯಾಗಿದ್ದು, ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ ಸುಮಾರು ₹65,000 ಮೌಲ್ಯದ 1.320 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ, 1985ರ ಸೆಕ್ಷನ್ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
Marijuana sale in Shivamogga: 1.32 kg of marijuana seized, one arrested
