SUDDILIVE || SHIVAMOGGA
ನಾಳೆ ಪಾಲಿಕೆ ಆಯುಕ್ತರಿಗೆ 'ಮುಖಾಮುಖಿ'- Mukhamuki Interaction with the Municipal Corporation Commissioner Tomorrow: Opportunity for Citizens to Present Problems and Suggestions
ಶಿವಮೊಗ್ಗ: ನಗರದ ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಅಭಿವೃದ್ಧಿ ಕುರಿತ ಸಲಹೆಗಳನ್ನು ಆಲಿಸುವ ಉದ್ದೇಶದಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಕೆ. ಮಯಣ್ಣ ಗೌಡ ಅವರೊಂದಿಗೆ ‘ಮುಖಾಮುಖಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಈ ಕಾರ್ಯಕ್ರಮವು ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಪತ್ರಿಕಾ ಭವನದಲ್ಲಿ ನಡೆಯಲಿದೆ.
ನಗರದಲ್ಲಿ ನೀರು ಸರಬರಾಜು, ರಸ್ತೆ, ಚರಂಡಿ, ಮಳೆನೀರು ನಿರ್ವಹಣೆ, ಕಸ ವಿಲೇವಾರಿ ಸೇರಿದಂತೆ ಯಾವುದೇ ನಾಗರಿಕ ಸಮಸ್ಯೆಗಳಿದ್ದರೆ ಸಾರ್ವಜನಿಕರು ನೇರವಾಗಿ ಆಯುಕ್ತರ ಗಮನಕ್ಕೆ ತರಬಹುದಾಗಿದೆ. ಅಲ್ಲದೆ ನಗರದ ಅಭಿವೃದ್ಧಿಗೆ ಸಂಬಂಧಿಸಿದ ಸಲಹೆಗಳು ಮತ್ತು ಅಭಿಪ್ರಾಯಗಳನ್ನೂ ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಗರದ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಗರದ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸುವಂತೆ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಆರ್.ಎಸ್. ಮನವಿ ಮಾಡಿದ್ದಾರೆ.
ಈ ಮುಖಾಮುಖಿ ಕಾರ್ಯಕ್ರಮವು ಸಾರ್ವಜನಿಕರು ಮತ್ತು ಪಾಲಿಕೆ ಅಧಿಕಾರಿಗಳ ನಡುವೆ ನೇರ ಸಂವಾದಕ್ಕೆ ವೇದಿಕೆಯಾಗಲಿದ್ದು, ನಗರದ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.
Mukhamuki Interaction with the Municipal Corporation Commissioner Tomorrow: Opportunity for Citizens to Present Problems and Suggestions
