ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದ ಪ್ರತಿಭಟನೆ: ಜಮೀರ್ ಅಹಮದ್ ಖಾನ್ ಅವರನ್ನು ಡಿಸಿಎಂ ಮಾಡಲು ಆಗ್ರಹ- Muslim community protests in Shivamogga: Demand to make Zameer Ahmed Khan DCM

SUDDILIVE || SHIVAMOGGA

ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದ ಪ್ರತಿಭಟನೆ: ಜಮೀರ್ ಅಹಮದ್ ಖಾನ್ ಅವರನ್ನು ಡಿಸಿಎಂ ಮಾಡಲು ಆಗ್ರಹ- Muslim community protests in Shivamogga: Demand to make Zameer Ahmed Khan DCM   

Muslim, zameer

ಶಿವಮೊಗ್ಗ: ರಾಜ್ಯದ ಹಿರಿಯ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ಸೋಮವಾರ ಭಾರಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು, ಜಮೀರ್ ಅಹಮದ್ ಖಾನ್ ಅವರು ಜನಪರ, ಜಾತ್ಯಾತೀತ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ನಾಯಕರಾಗಿದ್ದು, ಅಹಿಂದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಅವರು ಮಹತ್ವದ ಕೊಡುಗೆ ನೀಡಿದ್ದು, ಶಾಸಕರಾಗಿ ಹಾಗೂ ಸಚಿವರಾಗಿ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಬಡವರು, ನಿರ್ಗತಿಕರು ಮತ್ತು ಶೋಷಿತ ವರ್ಗಗಳ ಪರವಾಗಿ ನಿರಂತರವಾಗಿ ಧ್ವನಿಯೆತ್ತಿರುವ ಅವರ ಸೇವೆಯನ್ನು ಪರಿಗಣಿಸಿ ಉಪಮುಖ್ಯಮಂತ್ರಿಯ ಹುದ್ದೆ ನೀಡುವುದು ನ್ಯಾಯಸಮ್ಮತ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯ ಸರ್ಕಾರ ರಚನೆಯ ಸಂದರ್ಭದಲ್ಲಿ ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿಯ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆ ಸಮುದಾಯದಲ್ಲಿತ್ತು. ಆದರೆ ಅದು ಈಡೇರದಿರುವುದರಿಂದ ಅಸಮಾಧಾನ ಉಂಟಾಗಿದೆ ಎಂದು ಪ್ರತಿಭಟನೆಯಲ್ಲಿ ತಿಳಿಸಲಾಯಿತು.

ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರ ತಕ್ಷಣವೇ ಜಮೀರ್ ಅಹಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಿ ಪ್ರಮುಖ ಖಾತೆ ನೀಡಬೇಕು. ಜೊತೆಗೆ ಮುಸ್ಲಿಂ ಸಮುದಾಯದ ಇನ್ನಷ್ಟು ಅರ್ಹ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.

ಬೇಡಿಕೆ ಈಡೇರದಿದ್ದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಿ ವ್ಯಾಪಕ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಸ್ಲಿಂ ಹಕ್ಕುಗಳ ವೇದಿಕೆ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯ ನೇತೃತ್ವವನ್ನು ಮುಸ್ಲಿಂ ಹಕ್ಕುಗಳ ವೇದಿಕೆಯ ಅಧ್ಯಕ್ಷ ಮುನವರ್ ಪಾಷಾ (ಮುನ್ನು), ಉಪಾಧ್ಯಕ್ಷ ಮೊಹಮ್ಮದ್ ಸಾದಾತ್ ಉಲ್ಲಾ, ಕಾರ್ಯದರ್ಶಿ ಸೈಯದ್ ಮುಜಿಬುಲ್ಲಾ ಸೇರಿದಂತೆ ಸಮಾಜದ ಮುಖಂಡರಾದ ಇಮ್ರಾನ್, ಸೈಪುಲ್ಲಾ, ಶಫಿವುಲ್ಲಾ ಸಾಬ್, ಯಹ್ಯಾ ಹಾಗೂ ನೂರಾರು ಸಮುದಾಯದ ಮುಖಂಡರು ವಹಿಸಿದ್ದರು.

Muslim community protests in Shivamogga: Demand to make Zameer Ahmed Khan DCM  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close