ಧೀರ್ಘಾವಧಿ ಮಾತ್ರವಲ್ಲ, ಮೈಲುಗಲ್ಲು ಸಾಧನೆ ಮಾಡಿದ ಪ್ರಧಾನಿ ಮೋದಿ: ಸಂಸದ ಬಿ.ವೈ. ರಾಘವೇಂದ್ರ-PM Modi has not only achieved a long term but also a milestone: MP B.Y. Raghavendra

 SUDDILIVE || SHIVAMOGGA

ಧೀರ್ಘಾವಧಿ ಮಾತ್ರವಲ್ಲ, ಮೈಲುಗಲ್ಲು ಸಾಧನೆ ಮಾಡಿದ ಪ್ರಧಾನಿ ಮೋದಿ: ಸಂಸದ ಬಿ.ವೈ. ರಾಘವೇಂದ್ರ-PM Modi has not only achieved a long term but also a milestone: MP B.Y. Raghavendra     

Raghavendra, mp

ಶಿವಮೊಗ್ಗ: ಪ್ರಧಾನಿ ಅವರು ಕೇವಲ ದೀರ್ಘಾವಧಿ ಪ್ರಧಾನಿಯಾಗಿ ಮಾತ್ರವಲ್ಲದೆ ದೇಶಕ್ಕೆ ಅನೇಕ ಮೈಲುಗಲ್ಲು ಸಾಧನೆಗಳನ್ನು ನೀಡಿದ ಧೀಮಂತ ನಾಯಕರೆಂದು ಸಂಸದ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 4399 ದಿನಗಳ ಆಡಳಿತಾವಧಿ ಪೂರ್ಣಗೊಳಿಸುವ ಮೂಲಕ ಮಾಜಿ ಪ್ರಧಾನಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 100ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇಶಕ್ಕೆ ಯಾವುದೇ ಗಂಡಾಂತರ ಬಾರದಂತೆ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ಹಲವು ಐತಿಹಾಸಿಕ ಸಾಧನೆಗಳನ್ನು ಮಾಡಿದೆ. 25 ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಲಾಗಿದೆ. ಸ್ವಚ್ಛ ಭಾರತ ಅಭಿಯಾನದಡಿ 12 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. 15 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗಿದೆ. 80 ಕೋಟಿ ನಾಗರಿಕರಿಗೆ ಉಚಿತ ಆಹಾರ ಧಾನ್ಯ ವಿತರಿಸುವ ಯೋಜನೆ ಜಾರಿಯಲ್ಲಿದೆ ಎಂದು ಹೇಳಿದರು.

ದೇಶದಲ್ಲಿ ಮೋದಿ ಪ್ರಧಾನಿಯಾಗುವ ಮೊದಲು ಕೇವಲ ಐದು ನಗರಗಳಲ್ಲಿ ಮಾತ್ರ ಮೆಟ್ರೋ ರೈಲು ಸೇವೆ ಇತ್ತು. ಈಗ ಅದು 29 ನಗರಗಳಿಗೆ ವಿಸ್ತರಿಸಿದೆ. ಕಳೆದ 12 ವರ್ಷಗಳಲ್ಲಿ 2.30 ಲಕ್ಷಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಆರಂಭವಾಗಿದ್ದು, ಭಾರತವು ವಿಶ್ವದ ಪ್ರಮುಖ ಸ್ಟಾರ್ಟ್‌ಅಪ್ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ರೈತಪರ ಯೋಜನೆಗಳಿಗೆ ಆದ್ಯತೆ

ರೈತರ ಖಾತೆಗಳಿಗೆ ಮಧ್ಯವರ್ತಿಗಳಿಲ್ಲದೆ ನೇರವಾಗಿ ₹4 ಲಕ್ಷ ಕೋಟಿಗೂ ಅಧಿಕ ಮೊತ್ತವನ್ನು ಪಿಎಂ-ಕಿಸಾನ್ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ. ರೈತ ಕಲ್ಯಾಣಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದ್ದು, ಮೋದಿ ಅವರ 4399 ದಿನಗಳ ಆಡಳಿತ ರೈತರಿಗೆ ಸಮರ್ಪಿತವಾಗಿದೆ ಎಂದು ಹೇಳಿದರು.

ಜನ್‌ಧನ್ ಯೋಜನೆ, ಸ್ವಚ್ಛ ಭಾರತ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಜಲ್ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಡಿಜಿಟಲ್ ಇಂಡಿಯಾ ಸೇರಿದಂತೆ ಹಲವು ಯೋಜನೆಗಳು ದೇಶದ ಜನರ ಜೀವನಮಟ್ಟ ಸುಧಾರಣೆಗೆ ಕಾರಣವಾಗಿವೆ ಎಂದರು.

ಆರ್ಥಿಕ ಮತ್ತು ಡಿಜಿಟಲ್ ಕ್ಷೇತ್ರದಲ್ಲಿ ಪ್ರಗತಿ

2014ರಲ್ಲಿ ವಿಶ್ವದ 11ನೇ ಅತಿದೊಡ್ಡ ಆರ್ಥಿಕತೆಯಾಗಿದ್ದ ಭಾರತ ಇಂದು ನಾಲ್ಕನೇ ಸ್ಥಾನಕ್ಕೆ ಏರಿದೆ. ಡಿಜಿಟಲ್ ವಹಿವಾಟುಗಳು ಕಳೆದ ವರ್ಷಗಳಲ್ಲಿ ಒಂಬತ್ತು ಪಟ್ಟು ಹೆಚ್ಚಳ ಕಂಡಿದ್ದು, ದೇಶದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ಮಲೆನಾಡಿಗೆ ಕೇಂದ್ರದ ವಿಶೇಷ ಅನುದಾನ

ಕೇಂದ್ರ ಸರ್ಕಾರ ರೈಲ್ವೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ. ಶಿವಮೊಗ್ಗದಲ್ಲಿ ಕುವೆಂಪು ಹೆಸರಿನ ವಿಮಾನ ನಿಲ್ದಾಣ, ಸಿಗಂದೂರು ಸೇತುವೆ, ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ರೈಲು ಮಾರ್ಗ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಿವೆ. ಶಿವಮೊಗ್ಗ–ಶೃಂಗೇರಿ–ಮಂಗಳೂರು ರೈಲು ಸಂಪರ್ಕಕ್ಕಾಗಿ ಪ್ರಯತ್ನ ಮುಂದುವರಿದಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರಾದ ಹರಿಕೃಷ್ಣ, ಚಂದ್ರಶೇಖರ್, ಮಂಜುನಾಥ್, ಮಾಲ್ತೇಶ್ ಮೊದಲಾದವರು ಉಪಸ್ಥಿತರಿದ್ದರು. 

ಆಯುಷ್ಮಾನ್ ಭಾರತ್ ಯೋಜನೆಯಡಿ ಲಕ್ಷಾಂತರ ಜನರಿಗೆ ಆರೋಗ್ಯ ಸೇವೆ ದೊರೆತಿದ್ದು, ಆಯುಷ್ಮಾನ್ ಕಾರ್ಡ್‌ಗಳ ವಿತರಣೆಯೂ ವ್ಯಾಪಕವಾಗಿ ನಡೆದಿದೆ ಎಂದರು.

ರಾಷ್ಟ್ರೀಯ ಭದ್ರತೆಯಲ್ಲಿ ಶೂನ್ಯ ಸಹಿಷ್ಣುತೆ

ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಿದೆ. ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ, ಆಪರೇಷನ್ ಸಿಂದೂರ್ ಸೇರಿದಂತೆ ಹಲವು ಕ್ರಮಗಳ ಮೂಲಕ ರಾಷ್ಟ್ರದ ಭದ್ರತೆಯನ್ನು ಬಲಪಡಿಸಲಾಗಿದೆ ಎಂದು ಹೇಳಿದರು.

ಚಂದ್ರಯಾನ-3 ಯಶಸ್ಸು, ರಾಮ ಜನ್ಮಭೂಮಿ ದೇವಸ್ಥಾನ ನಿರ್ಮಾಣ, ಆರ್ಟಿಕಲ್ 370 ರದ್ದು ಸೇರಿದಂತೆ ಹಲವು ಐತಿಹಾಸಿಕ ನಿರ್ಧಾರಗಳು ಮೋದಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿವೆ ಎಂದು ಹೇಳಿದರು.

ಗ್ಯಾಸ್ ಪೂರೈಕೆಯಲ್ಲಿ ಎಚ್ಚರಿಕೆ

ಭಾರತ ತನ್ನ ಇಂಧನ ಅಗತ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮದು ಅವಲಂಬಿತವಾಗಿದೆ. ಜಾಗತಿಕ ಯುದ್ಧದಂತಹ ಸೂಕ್ಷ್ಮ ಪರಿಸ್ಥಿತಿಗಳ ನಡುವೆಯೂ ದೇಶದಲ್ಲಿ ಯಾವುದೇ ದೊಡ್ಡ ಸಮಸ್ಯೆ ಉಂಟಾಗದಂತೆ ಕೇಂದ್ರ ಸರ್ಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಎದುರಾಗಿರುವ ತೊಂದರೆಗಳು ತಾತ್ಕಾಲಿಕವಾಗಿವೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಟೀಕೆ

ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರ ಸಮರ್ಪಕ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು, ಪಶ್ಚಿಮ ಬಂಗಾಳದ ಉದಾಹರಣೆಯನ್ನು ಉಲ್ಲೇಖಿಸಿ ಜನರು ಅಭಿವೃದ್ಧಿಗೆ ಆದ್ಯತೆ ನೀಡುವ ಸರ್ಕಾರಗಳನ್ನು ಬೆಂಬಲಿಸುತ್ತಾರೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಗೆ ಸೇರ್ಪಡೆಗೊಳಿಸುವ ಕುರಿತು ರಾಜ್ಯ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದು, ಉಡಾನ್ ಯೋಜನೆಯ ಮುಂದಿನ ಹಂತಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರಾದ ಹರಿಕೃಷ್ಣ, ಚಂದ್ರಶೇಖರ್, ಮಂಜುನಾಥ್, ಮಾಲ್ತೇಶ್, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಮೊದಲಾದವರು ಉಪಸ್ಥಿತರಿದ್ದರು. 

PM Modi has not only achieved a long term but also a milestone: MP B.Y. Raghavendra

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close