ಶಿಕಾರಿಪುರದಲ್ಲಿ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹5.40 ಲಕ್ಷ ಮೌಲ್ಯದ ಚಿನ್ನಾಭರಣ ವಶ-Police crack jewellery theft case in Shikaripura: Jewellery worth ₹5.40 lakh seized

SUDDILIVE || SHIVAMOGGA

ಶಿಕಾರಿಪುರದಲ್ಲಿ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹5.40 ಲಕ್ಷ ಮೌಲ್ಯದ ಚಿನ್ನಾಭರಣ ವಶ-Police crack jewellery theft case in Shikaripura: Jewellery worth ₹5.40 lakh seized    

Pilice, jewellery

ಶಿವಮೊಗ್ಗ, ಜೂನ್ 12: ಶಿಕಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಕಳುವಾಗಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 4ರಂದು ಶಿಕಾರಿಪುರ ಪಟ್ಟಣದ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿ ಚಿನ್ನಾಭರಣ ಕಳುವಾಗಿರುವ ಕುರಿತು ದೂರು ನೀಡಿದ್ದರು. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು 28 ಗ್ರಾಂ ತೂಕದ ಚಿನ್ನಾಭರಣ, 130 ಗ್ರಾಂ ಬೆಳ್ಳಿ ವಸ್ತುಗಳು, ಹಾಗೂ ₹2 ಲಕ್ಷ ನಗದು ಸೇರಿದಂತೆ ಒಟ್ಟು ₹5,40,800 ಮೌಲ್ಯದ ಮಾಲು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯನ್ನು ಶಿಕಾರಿಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದು, ಪ್ರಕರಣದ ಮತ್ತಷ್ಟು ತನಿಖೆ ಮುಂದುವರಿದಿದೆ.

ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Police crack jewellery theft case in Shikaripura: Jewellery worth ₹5.40 lakh seized

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close