SUDDILIVE || SHIVAMOGGA
ಶಿವಮೊಗ್ಗದಲ್ಲಿ ಜೂನ್ 6ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-Power outage in many areas of Shivamogga on June 6th
ಶಿವಮೊಗ್ಗ, ಜೂನ್ 4: ಮೆಸ್ಕಾಂ ವತಿಯಿಂದ ವಿವಿಧ ವಿದ್ಯುತ್ ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ ತುರ್ತು ಕಾಮಗಾರಿಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜೂನ್ 6ರಂದು ಶಿವಮೊಗ್ಗ ನಗರ ಮತ್ತು ಗ್ರಾಮೀಣ ಭಾಗಗಳ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕುಂಸಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಕುಂಸಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಾಗೂ ತುರ್ತು ಕಾಮಗಾರಿ ನಡೆಯಲಿದ್ದು, ಜೂನ್ 6ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಈ ಅವಧಿಯಲ್ಲಿ ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಹರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ಹಲವು ಪ್ರದೇಶಗಳಲ್ಲೂ ವಿದ್ಯುತ್ ಕಡಿತ
ಇದೇ ವೇಳೆ, ಎಂ.ಆರ್.ಎಸ್. ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 6ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.
ಕೆ.ಆರ್.ಪುರಂ, ಗಾಂಧಿಬಜಾರ್, ನಾಗಪ್ಪಕೇರಿ, ಸಾವರ್ಕರ್ ನಗರ, ಬಿ.ಎಚ್. ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಕೋಟೆ ರಸ್ತೆ, ಎಸ್.ಪಿ.ಎಂ. ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಓ.ಬಿ.ಎಲ್. ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ತುಳುಜಾ ಭವಾನಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ವ್ಯತ್ಯಯದ ವ್ಯಾಪ್ತಿಗೆ ಒಳಪಡಲಿವೆ.
ವಿದ್ಯುತ್ ನಿರ್ವಹಣಾ ಕಾಮಗಾರಿಗೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.

