ಶಿವಮೊಗ್ಗದಲ್ಲಿ ಜೂನ್ 4, 5 ಮತ್ತು 6ರಂದು ಹಲವೆಡೆ ವಿದ್ಯುತ್ ವ್ಯತ್ಯಯ-Power outages in many places in Shivamogga on June 4, 5 and 6

SUDDILIVE || SHIVAMOGGA

ಶಿವಮೊಗ್ಗದಲ್ಲಿ ಜೂನ್ 4, 5 ಮತ್ತು 6ರಂದು ಹಲವೆಡೆ ವಿದ್ಯುತ್ ವ್ಯತ್ಯಯ-Power outages in many places in Shivamogga on June 4, 5 and 6  

Power, Outage

ಶಿವಮೊಗ್ಗ, ಜೂನ್ 3: ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ನಿರ್ವಹಣಾ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಜೂನ್ 4, 5 ಮತ್ತು 6ರಂದು ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಜೂನ್ 4 ಮತ್ತು 5ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-2 ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪ್ರದೇಶಗಳು:
ಎಎನ್‌ಕೆ ಮುಖ್ಯರಸ್ತೆ, ಜೈಲ್ ರಸ್ತೆ, ಚನ್ನಪ್ಪ ಲೇಔಟ್, ಅಚ್ಯುತ್‌ರಾವ್ ಲೇಔಟ್, ವೆಂಕಟೇಶನಗರ, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಜೂನ್ 5ರಂದು ಅಲ್ಕೋಳ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಎಎಫ್-12 ಫೀಡರ್‌ನಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಪ್ರದೇಶಗಳು:
ಅಲ್ಕೋಳ, ಎಸ್.ಎಲ್.ವಿ ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಎಚ್. ಪಟೇಲ್ ಬಡಾವಣೆ (ಎ ರಿಂದ ಎಫ್ ಬ್ಲಾಕ್), ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು.

ಜೂನ್ 6ರಂದು ನಗರದ ಹಲವು ಭಾಗಗಳಲ್ಲಿ ದಿನಪೂರ್ತಿ ವಿದ್ಯುತ್ ವ್ಯತ್ಯಯ

110/11 ಕೆ.ವಿ. ವಿ.ವಿ. ಕೇಂದ್ರ ಹಾಗೂ ಎಂ.ಆರ್.ಎಸ್. ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಪ್ರಮುಖ ಪ್ರದೇಶಗಳು:
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್. ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್ ಎಂ.ವಿ. ರಸ್ತೆ, ಬಾಲರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಶಂಕರ ಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿ ನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಬ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು.

ಮೆಸ್ಕಾಂ ಅಧಿಕಾರಿಗಳು ಕಾಮಗಾರಿ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

Power outages in many places in Shivamogga on June 4, 5 and 6

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close