SUDDILIVE ||SHIVAMOGGA
ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- Pregnant woman who was married just three months ago commits suicide by hanging herself
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕು, ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತರನ್ನು ಸ್ವಾತಿ(26) ಎಂದು ಗುರುತಿಸಲಾಗಿದೆ. ಅವರು ಶಿಕಾರಿಪುರ ಮೂಲದವರೊಂದಿಗೆ ಸುಮಾರು ಮೂರು ತಿಂಗಳ ಹಿಂದೆ ವಿವಾಹವಾಗಿದ್ದು, ಗರ್ಭಿಣಿಯಾಗಿದ್ದರು ಎನ್ನಲಾಗಿದೆ. ಸದ್ಯ ತವರು ಮನೆಯಲ್ಲಿ ತಂದೆ ತಾಯಿ ಹೊಲಕ್ಕೆ ಹೋದಾಗ ಸೀರೆಯನ್ನ ಉರುಳು ಮಾಡಿಕೊಂಡು ತನ್ನ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಟುಂಬದವರ ಮಾಹಿತಿ ಪ್ರಕಾರ, ಸ್ವಾತಿ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಹಾಗೂ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ತುಂಬ ವಾಂತಿ ಹಾಗೂ ಹೊಟ್ಟೆ ನೋವನ್ನು ತಾಳಲಾರದೆ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಅಕ್ಕಪಕ್ಕದವರು ಹೊಲದಲ್ಲಿದ್ದ ಮೃತರ ತಂದೆ ತಾಯಿಗೆ ಘಟನೆ ತಿಳಿಸಿದ್ದಾರೆ. ಮನೆಯ ಬಾಗಿಲು ಮುರಿದು ನೆರೆಹೊರೆಯರು ಸ್ವಾತಿಯನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
