SUDDILIVE || BHADRAVATHI
10 ಗೋವುಗಳ ರಕ್ಷಣೆ-Protection of 10 cows
ಅಕ್ರಮ ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ 10 ಗೋವುಗಳನ್ನು ರಕ್ಷಿಸಿರುವ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಭಿಸಿದ ಮಾಹಿತಿಯಂತೆ, ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ವೇಳೆ 10 ಗೋವುಗಳು ಪತ್ತೆಯಾಗಿವೆ. ಬಳಿಕ ಕಾರ್ಯಕರ್ತರು ಗೋವುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ಶಿವಮೊಗ್ಗದ ಮಹಾವೀರ್ ಗೋಶಾಲೆಗೆ ಕಳುಹಿಸಿದ್ದಾರೆ.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ಆರೋಪಿಗಳ ಪತ್ತೆಗಾಗಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
