ಗೋಪಿ ವೃತ್ತದಲ್ಲಿ ಕೇಂದ್ರ ಸಚಿವರ ಪ್ರತಿಕೃತಿ ದಹಿಸಿ ಪ್ರತಿಭಟನೆ- Protest by burning effigy of Union Minister in Gopi Circle

SUDDILIVE || SHIVAMOGGA

ಗೋಪಿ ವೃತ್ತದಲ್ಲಿ ಕೇಂದ್ರ ಸಚಿವರ ಪ್ರತಿಕೃತಿ ದಹಿಸಿ ಪ್ರತಿಭಟನೆ- Protest by burning effigy of Union Minister in Gopi Circle   

Effigy, minister



ಶಿವಮೊಗ್ಗ, ಜೂನ್ 27: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಪಡಿಸಿ, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಪ್ರವೇಶಕ್ಕೆ ರಾಜ್ಯಮಟ್ಟದ ಸಿಇಟಿ (CET) ಪರೀಕ್ಷೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಕಚೇರಿಯಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಶವಯಾತ್ರೆ ನಗರದ ಗೋಪಿ ವೃತ್ತದಲ್ಲಿ  ಅವರ ಪ್ರತಿಕೃತಿಯನ್ನು ದಹಿಸಿ  ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಪರೀಕ್ಷಾ ವ್ಯವಸ್ಥೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಇಟಿ ಆಧಾರಿತ ಪ್ರವೇಶ ವ್ಯವಸ್ಥೆಯನ್ನು ಮರುಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

Effigy, burning

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಮಾತನಾಡಿ, ನೀಟ್ ಪರೀಕ್ಷೆಯು ಗ್ರಾಮೀಣ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಹಿನ್ನಡೆಯಾಗುವಂತೆ ಮಾಡಿದೆ. ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯನ್ನೇ ವೈದ್ಯಕೀಯ ಪ್ರವೇಶಕ್ಕೂ ಅನ್ವಯಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ನೀಟ್ ಪರೀಕ್ಷೆಯ ನಿರ್ವಹಣೆ ಹಾಗೂ ಅದರ ಸುತ್ತಲಿನ ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. "ನೀಟ್ ರದ್ದು ಮಾಡಿ", "ರಾಜ್ಯ ಸಿಇಟಿ ಜಾರಿಗೆ ತನ್ನಿ", "ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಲಿ" ಎಂಬ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ನೀತಿಗಳನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಕೆಲಕಾಲ ಗೋಪಿ ವೃತ್ತದಲ್ಲಿ ಸಂಚಾರ ದಟ್ಟಣೆ ಉಂಟಾದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಯುವಂತೆ ಕ್ರಮ ಕೈಗೊಂಡರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಈ ಸಂದರ್ಭದಲ್ಲಿ ಯುವ ಮುಖಂಡ ಮಧುಸೂದನ್, ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ  ಗಿರೀಶ್, ಮಹಮದ್ ಗೌಸ್, ಪ್ರಧಾನ ಕಾರ್ಯದರ್ಶಿಗಳಾದ  ಅಬ್ದುಲ್, ಮಲಗೊಪ್ಪ ಶಿವು, ರೇಷ್ಮಾ,ಗೌತಮ್, ಬಾಬು, ತೌಫಿಕ್, ನಿಖಿಲ್, ವಿಷ್ಣು, ಆಕಾಶ್, ಅಶೋಕ್, ಲಿಂಗರಾಜು, ರವಿ, ಯೋಗೇಶ್,ಅರುಣ್, ಪ್ರಶಾಂತ್, ಗೌತಮ್, ದೃಶ್ಯ, ರೋಷನ್, ಅನೂಪ್, ಮನು, ಗಣೇಶ್, ಗಗನ್ ಹಾಗೂ ನೂರಾರು ಯುವಕ ಮುಖಂಡರು ಪಾಲ್ಗೊಂಡಿದ್ದರು

Protest by burning effigy of Union Minister in Gopi Circle

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close