ಕುವೆಂಪು ವಿವಿಯಿಂದ ಸಚಿನ್ ಎನ್.ಜೆ ಅವರಿಗೆ ಪಿಎಚ್.ಡಿ ಪದವಿ-Sachin N.J. Awarded Ph.D. by Kuvempu University

SUDDILIVE || SHIVAMOGGA

ಕುವೆಂಪು ವಿವಿಯಿಂದ ಸಚಿನ್ ಎನ್.ಜೆ ಅವರಿಗೆ ಪಿಎಚ್.ಡಿ ಪದವಿ-Sachin N.J. Awarded Ph.D. by Kuvempu University   

Sachin, PhD


ಶಿವಮೊಗ್ಗ, ಜೂನ್ 20: ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಚಿನ್ ಎನ್.ಜೆ ಅವರಿಗೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಘೋಷಿಸಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ "ಅಭಿವೃದ್ಧಿ ಸಂವಹನದ ಮಾಧ್ಯಮವಾಗಿ ಚಲನಚಿತ್ರ: ಆಯ್ದ ಕನ್ನಡ ಚಲನಚಿತ್ರಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ" ಎಂಬ ವಿಷಯದ ಕುರಿತು ಸಚಿನ್ ಅವರು ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು.

ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮದವರಾದ ಸಚಿನ್ ಎನ್.ಜೆ ಅವರು ಜಯಪ್ಪ ಹಾಗೂ ಸುಜಾತ ದಂಪತಿಯ ಪುತ್ರರಾಗಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ರಿಪ್ಪನ್‌ಪೇಟೆಯ ಚಂದಳ್ಳಿಯಲ್ಲಿ ಪೂರ್ಣಗೊಳಿಸಿದ ಅವರು, ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ರಿಪ್ಪನ್‌ಪೇಟೆಯಲ್ಲಿಯೇ ಮುಗಿಸಿದ್ದಾರೆ.

ಬಳಿಕ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು, ಸಂಶೋಧನಾ ಕ್ಷೇತ್ರದಲ್ಲಿಯೂ ಗಮನಾರ್ಹ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಸಚಿನ್ ಎನ್.ಜೆ ಅವರು ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು (ಸ್ವಾಯತ್ತ)ಯ ಪತ್ರಿಕೋದ್ಯಮ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಚಿನ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿರುವ ಹಿನ್ನೆಲೆಯಲ್ಲಿ ಕುಟುಂಬದವರು, ಸ್ನೇಹಿತರು, ಅಧ್ಯಾಪಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Sachin N.J. Awarded Ph.D. by Kuvempu University 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close