SUDDILIVE || SHIVAMOGGA
ಶಿವಮೊಗ್ಗ ಕೋರ್ಟ್ ಗೆ ಬಾಂಬ್ ಹಾಕುವುದಾಗಿ ಎರಡನೇ ಬಾರಿ ಬೆದರಿಕೆ- Second time threatening to bomb Shivamogga court
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಸ್ಫೋಟದ ಬೆದರಿಕೆ ಹಾಕಿರುವ ಇ-ಮೇಲ್ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಜೂನ್ 24ರಂದು ಮಧ್ಯರಾತ್ರಿ ಸುಮಾರು 1.37 ಗಂಟೆಗೆ ajjmal.kasab@atomicmail.io ಎಂಬ ಇ-ಮೇಲ್ ವಿಳಾಸದಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಕೃತ ಇ-ಮೇಲ್‌ಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇ-ಮೇಲ್‌ನಲ್ಲಿ ತಮಿಳುನಾಡಿನ ರಾಜಕೀಯ, ಮಾಧ್ಯಮ ಹಾಗೂ ಅಪ್ರಾಪ್ತ ಬಾಲಕಿಯರ ಕುರಿತು ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದ್ದು, ನ್ಯಾಯಾಂಗ ವ್ಯವಸ್ಥೆಯನ್ನು ಉಲ್ಲೇಖಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಮಧ್ಯಾಹ್ನ 2.30ಕ್ಕೆ ಸ್ಫೋಟ ನಡೆಯಲಿದೆ ಎಂದು ಬೆದರಿಕೆ ಹಾಕಲಾಗಿತ್ತು.
ಈ ಕುರಿತು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಜಿ.ಎಂ. ಶ್ರೀಲಕ್ಷ್ಮಿ ಅವರು ಜಯನಗರ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅದರಂತೆ ನಿನ್ನೆ ಮತ್ತೆ ಬಾಂಬ್ ಸ್ಪೋಟದ ಬೆದರಿಕೆ ಬಂದಿದ್ದರಿಂದ ಪೊಲೀಸ್ ತಪಾಸಣೆ ನಿರಂತರಗೊಂಡಿದೆ. ಎರಡು ಬಾರಿ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಈಗ ಕೋರ್ಟ್ ನಲ್ಲಿ ತಪಾಸಣೆ ನಿರಂತರಗೊಂಡಿದೆ. ಈ ಬಗ್ಗೆ ಎಸ್ಪಿ ನಿಖಿಲ್ ಸುದ್ದಿಲೈವ್ ಗೆ ಮಾಹಿತಿ ನೀಡಿ ಇಂದು ಬೆದರಿಕೆ ಬಂದಿಲ್ಲ ಆದರೆ ನಿನ್ನೆ ಮತ್ತೊಂದು ಬೆದರಿಕೆ ಬಂದಿತ್ತು. ಅದನ್ನೂ ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು ದೂರು ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.
Second time threatening to bomb Shivamogga court
