ಬ್ರೇಕಿಂಗ್ ನ್ಯೂಸ್ | ರಿಪ್ಪನ್ ಪೇಟೆ ಬಳಿ ಭೀಕರ ರಸ್ತೆ ಅಪಘಾತ-10 ಕ್ಕೂ ಹೆಚ್ಚು ಮಂದಿ ಮೆಗ್ಗಾನ್ ಗೆ ದಾಖಲು-Breaking News | Serious road accident near Riponpet - More than 10 people admitted to Meggan

 SUDDILIVE || RIPPONPETE

ಬ್ರೇಕಿಂಗ್ ನ್ಯೂಸ್ | ರಿಪ್ಪನ್ ಪೇಟೆ ಬಳಿ ಭೀಕರ ರಸ್ತೆ ಅಪಘಾತ-10 ಕ್ಕೂ ಹೆಚ್ಚು ಮಂದಿ ಮೆಗ್ಗಾನ್ ಗೆ ದಾಖಲು-Breaking News | Serious road accident near Riponpet - More than 10 people admitted to Meggan    

Road, accident


ರಿಪ್ಪನ್ ಪೇಟೆ, ಜೂನ್ 6: ರಿಪ್ಪನ್ ಪೇಟೆ ಸಮೀಪದ ಬಾಳೂರು ಬಳಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶಿಕಾರಿಪುರ ತಾಲೂಕಿನ ಓತಿನಕಟ್ಟೆ ಗ್ರಾಮದವರನ್ನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನವು ರಿಪ್ಪನ್ ಪೇಟೆ–ಆನಂದಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಾಹನದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.

ಅಪಘಾತದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುಗಳ ರಕ್ಷಣೆಗೆ ಧಾವಿಸಿ, ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರವನ್ನು ಸುಗಮಗೊಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಅಪಘಾತದಿಂದ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಾಯಾಳುಗಳ ಗುರುತು ಮತ್ತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Serious road accident near Riponpet - More than 10 people admitted to Meggan

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close