SUDDILIVE || SHIVAMOGGA
ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್‌ಗೆ ಶಿವಮೊಗ್ಗ ಜಿಲ್ಲಾ ಪೊಲೀಸರ ಆಯ್ಕೆ- Shivamogga District Police selected for DG and IGP Appreciation Disc
ಶಿವಮೊಗ್ಗ, ಜೂನ್ 24: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನೀಡಲಾಗುವ ಪ್ರತಿಷ್ಠಿತ DG&IGP Commendation Disc 2025-26 ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಇಬ್ಬರು ಅಧಿಕಾರಿಗಳು ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೆಬ್ಬೂರು ಪೊಲೀಸ್ ಠಾಣೆಯ ಅಧಿಕಾರಿ ಶ್ರೀ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್ಪಿ ಶ್ರೀ ದಿಲೀಪ್ ಎಸ್.ವಿ. ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ.
ಕರ್ತವ್ಯನಿಷ್ಠೆ, ಹುದ್ದೆಯ ಜವಾಬ್ದಾರಿಗಳ ಸಮರ್ಪಕ ನಿರ್ವಹಣೆ ಹಾಗೂ ಪೊಲೀಸ್ ಸೇವೆಯಲ್ಲಿ ತೋರಿದ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಇಬ್ಬರು ಅಧಿಕಾರಿಗಳ ಆಯ್ಕೆಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ ದೊರೆತಿದ್ದು, ಜಿಲ್ಲೆಯ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
DG&IGP Commendation Disc ರಾಜ್ಯ ಪೊಲೀಸ್ ಇಲಾಖೆಯ ಅತ್ಯುನ್ನತ ಪ್ರಶಂಸಾ ಗೌರವಗಳಲ್ಲಿ ಒಂದಾಗಿದ್ದು, ಪೊಲೀಸ್ ಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುತ್ತದೆ.
