SUDDILIVE || SHIVAMOGGA
ಜೆ.ಎನ್.ಎನ್.ಸಿ.ಇಯಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಕುರಿತು ವಿಶೇಷ ಸಂವಾದ-Special discussion on CET/COMED-K seat selection in JNNCE
ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಜೂನ್ 14ರಂದು (ಭಾನುವಾರ) ಬೆಳಿಗ್ಗೆ 10 ಗಂಟೆಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರು ಭಾಗವಹಿಸಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಅಲ್ಲದೆ, ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ (Live Demonstration) ಸಹ ನಡೆಯಲಿದೆ.
ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿದ್ಯಾರ್ಥಿವೇತನ ಯೋಜನೆಗಳು ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ವಿವರವಾಗಿ ಮಾಹಿತಿ ನೀಡಲಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಕಾಲೇಜು ಆಡಳಿತ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಆಗಮಿಸುವವರ ಅನುಕೂಲಕ್ಕಾಗಿ ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಜೆ.ಎನ್.ಎನ್.ಸಿ.ಇ. ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 96324 71667 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

