ಮಧು ಬಂಗಾರಪ್ಪಗೆ ಡಿಸಿಎಂ ಸ್ಥಾನ ನೀಡಲು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಆಗ್ರಹ-Sri Narayana Guru Vichar Vedike demands to give Madhu Bangarappa the post of DCM

SUDDILIVE || SHIVAMOGGA

ಮಧು ಬಂಗಾರಪ್ಪಗೆ ಡಿಸಿಎಂ ಸ್ಥಾನ ನೀಡಲು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಆಗ್ರಹ-Sri Narayana Guru Vichar Vedike demands to give Madhu Bangarappa the post of DCM




ರಾಜ್ಯ ರಾಜಕಾರಣದಲ್ಲಿ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಆಗ್ರಹಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಪ್ರವೀಣ್ ಹಿರೇಗೋಡ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೊಸ ಸಚಿವ ಸಂಪುಟ ರಚನೆ ಪ್ರಕ್ರಿಯೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈಡಿಗ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಜನಸಂಖ್ಯೆಯ ದೃಷ್ಟಿಯಿಂದ ನಾಲ್ಕನೇ ಅತಿದೊಡ್ಡ ಸಮುದಾಯವಾಗಿರುವ ಈಡಿಗ ಸಮುದಾಯದ ಪ್ರತಿನಿಧಿಯಾಗಿ ಮಧು ಬಂಗಾರಪ್ಪ ಅವರು ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರರಾಗಿರುವ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ಅವರ ಅನುಭವ ಮತ್ತು ಆಡಳಿತಾತ್ಮಕ ಸಾಮರ್ಥ್ಯವನ್ನು ಪರಿಗಣಿಸಿ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಜೊತೆಗೆ ಶಿವಮೊಗ್ಗ ಜಿಲ್ಲೆಯ ಗೋಪಾಲಕೃಷ್ಣ ಬೇಳೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಪಾಡಬೇಕು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಒತ್ತಾಯಿಸಿತು.

Sri Narayana Guru Vichar Vedike demands to give Madhu Bangarappa the post of DCM

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close