ಜೂ.28 ಕ್ಕೆ ಜಿಲ್ಲೆಯ ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ದಿನಾಚರಣೆ-Talent award ceremony for SSLC and PUC students of government employees of the district and Women's Day celebration on June 28

SUDDILIVE || SHIVAMOGGA

ಜೂ.28 ಕ್ಕೆ ಜಿಲ್ಲೆಯ ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ದಿನಾಚರಣೆ-Talent award ceremony for SSLC and PUC students of government employees of the district and Women's Day celebration on June 28     

Award, ceremony

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಲ್ಲೆಯ ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ದಿನಾಚರಣೆಯನ್ನು ಜೂ. 28 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮAದಿರಲ್ಲಿ ಹಮ್ಮಿಕೊಳ್ಳಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಮಕ್ಕಳಿಗೆ ಕಕಳೆದ 5 ವರ್ಷದಿಂದ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, 2 ಸಾವಿರ ರೂ ನಗದು, ಶಾಲು, ಹಾರ ಹಾಗೂ ನೆನಪಿನನ ಕಾಣಿಕೆಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಇಲ್ಲಿಯವರೆಗೆ ಸಂಘ 2 ಕೋಟಿ ರೂ ಹೆಚ್ಚು ಖರ್ಚ ಮಾಡಿದೆ.. ಶಿವಮೊಗ್ಗದಲ್ಲಿ ಈ ಪ್ರಸಕ್ತ ವರ್ಷದ ಪತ್ರಿಭಾ ಪುರಸ್ಕಾರ ಮೊದಲನೇಯದಾಗಿದ್ದು, ಸುಮಾರು ಜಿಲ್ಲೆಯ 450 ಕ್ಕೂ ಹೆಚ್ಚು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ 8 ಜಿಲ್ಲೆಗಳನ್ನು ಸೇರಿಸಿ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅದೇ ರೀತಿ ಇನ್ನುಳಿದ ಜಿಲ್ಲೆಗಳಲ್ಲೂ ಸಹ ಈಗ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಹಾಗೂ ಶಿವಮೊಗ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ವಿನಯಾನಂದ ಸರಸ್ವತಿ ವಹಿಸಲಿದ್ದು, ಉದ್ಘಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಂಎಡಿಬಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಸುಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಒಓ ಹೇಮಂತ್.ಎನ್. ಎಸ್‌ಪಿ ನಿಖಿಲ್.ಬಿ ಆಗಮಿಸುವರು.

ಸಂಘ ಜಿಲ್ಲಾ ಅಧ್ಯಕ್ಷ ಆರ್.ಮೋಹನ್ ಕುಮಾರ್ ಉಪಸ್ಥಿತರಿದ್ದು, ಖ್ಯಾತ ಮನೋವೈದ್ಯ ಡಾ.ಕೆ.ಎಸ್ ಪವಿತ್ರ “ ಆರೋಗ್ಯ ಮತ್ತು ಮಹಿಳಾ ಕಲ್ಯಾಣ” ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವೇದಿಕೆ ಕಾರ್ಯಕ್ರಮದ ನಂತರ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯ ನಟ ರಾಘವೇಂದ್ರ ಕೆ.ಆರ್ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಡ ಚಿಲ್ಲರ್ ಮಂಜು ಇವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದರು. 

ಸಂಜೆ ಕಾರ್ಯಕ್ರಮ

ಅಂದು ಸಂಜೆ 5 ಗಂಟೆಗೆ ಶಿವಕುಮಾರ್ ಸ್ವಾಮಿಗಳ ನೌಕರರ ಸಂಘ ಶಿವಮೊಗ್ಗ ವತಿಯಿಂದ 2025-26 ನೇ ಸಾಲಿನ ಸಂಘ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧನೆಗೈದ ಹಳೆ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಕುವೆಂಪು ರಂಗಮಂದಿರಲ್ಲಿ ಆಯೋಜಿಸಲಾಗಿದೆ ಎಂದರು.‌

ಕಾರ್ಯಕ್ರಮದ ಸಾನಿಧ್ಯವನ್ನು ಬೆಕ್ಕಿನಕಲ್ಮಠದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ತರಳುಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ತುಮಕೂರಿನ ಸಿದ್ದಗಂಗಾಮಠದ ಶ್ರೀ ಶಿವಸಿದ್ದೇಶ್ವರ ಸ್ವಾಮಿ ವಹಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟನೆ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕ ಡಾ.ಧನಂಜಯ್ ಸರ್ಜಿ, ಮಾಜಿ ಸಂಸದ ಆಯನೂರು ಮಂಜುನಾಥ್, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸೇರಿದಂತೆ ಇನ್ನಿತರರು ಆಗಮಿಸುವರು.

ವೇದಿಕೆ ಕಾರ್ಯಕ್ರಮದ ನಂತರ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯ ನಟ ರಾಘವೇಂದ್ರ ಕೆ.ಆರ್ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಡ ಚಿಲ್ಲರ್ ಮಂಜು ಇವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದರು.

Talent award ceremony for SSLC and PUC students of government employees of the district and Women's Day celebration on June 28

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close