ಜಿಲ್ಲಾ ಜನತಾದಳ (ಜೆಡಿಎಸ್) ವತಿಯಿಂದ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ- The District Janata Dal (JDS) has called for a fight against the government

SUDDILIVE || SHIVAMOGGA

ಜಿಲ್ಲಾ ಜನತಾದಳ (ಜೆಡಿಎಸ್) ವತಿಯಿಂದ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ- The District Janata Dal (JDS) has called for a fight against the government   

Jantadal, jds

ಶಿವಮೊಗ್ಗ, ಜೂನ್ 15: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಜೈ ಜನತಾದಳ (ಜೆಡಿಎಸ್) ಶಿವಮೊಗ್ಗ ಜಿಲ್ಲಾ ಘಟಕ, ಎಸ್‌ಟಿ ಸಮುದಾಯಕ್ಕೆ ಮೀಸಲಾದ ಅನುದಾನ ದುರ್ಬಳಕೆ, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ನಿರ್ಲಕ್ಷ್ಯದ ವಿರುದ್ಧ ಹೋರಾಟಕ್ಕೆ ಕರೆ ನೀಡಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕಿ ಶಾರದ ಪೂರ್ಯನಾಯ್ಕ್, ಎಸ್‌ಟಿ ಸಮುದಾಯಕ್ಕೆ ಮೀಸಲಾದ ಅನುದಾನಗಳ ಬಳಕೆಯಲ್ಲಿ ದೊಡ್ಡ ಮಟ್ಟದ ಅನ್ಯಾಯವಾಗಿದೆ ಎಂದು ಆರೋಪಿಸಿದರು. ವಿದ್ಯಾರ್ಥಿವೇತನ, ಅಭಿವೃದ್ಧಿ ಯೋಜನೆಗಳು ಹಾಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಾದ ಹಣ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಹೇಳಿದರು.

“ನನ್ನ ಕ್ಷೇತ್ರ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಹಲವೆಡೆ ವಾಲ್ಮೀಕಿ ಭವನ ನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಎಸ್‌ಟಿ ಸಮುದಾಯದ ಅನುದಾನವನ್ನು ವಾಪಸ್ ತಂದು ಆ ಸಮಾಜದ ಅಭಿವೃದ್ಧಿಗೆ ಬಳಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಎರಡು ವರ್ಷ ಕಳೆದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ” ಎಂದು ಅವರು ಟೀಕಿಸಿದರು.

ಮುಖ್ಯಮಂತ್ರಿ ತಕ್ಷಣ ಎಸ್‌ಟಿ ಸಮುದಾಯಕ್ಕೆ ಮೀಸಲಾದ ಹಣವನ್ನು ಎಸ್‌ಟಿ ನಿಗಮಕ್ಕೆ ಮರಳಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಆ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಜೆಡಿಎಸ್ ಮುಖಂಡರು ಸರ್ಕಾರದ ವಿರುದ್ಧ ಒಂಬತ್ತು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಇಳಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಹಗರಣಗಳ ಕುರಿತು ನ್ಯಾಯಾಂಗ ತನಿಖೆ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೊರೆಯಾಗಿರುವ ವಿದ್ಯುತ್ ದರ ಹೆಚ್ಚಳ ಹಿಂಪಡೆದು ದರ ಇಳಿಕೆ, ಗಂಗಾ ಕಲ್ಯಾಣ ಸೇರಿದಂತೆ ಹಿಂದುಳಿದ ವರ್ಗಗಳ ಯೋಜನೆಗಳಿಗೆ ಹೆಚ್ಚಿನ ಅನುದಾನ, ಗೃಹ ಒಡತನ ಹಾಗೂ ಉದ್ಯಮಶೀಲತಾ ಯೋಜನೆಗಳಿಗೆ ಸೂಕ್ತ ಹಣಕಾಸು ನೆರವು, ಸಂವಿಧಾನಕ್ಕೆ ವಿರುದ್ಧವಾದ ನಿರ್ಧಾರಗಳನ್ನು ಕೈಬಿಡುವುದು, ನರೇಗಾ ಯೋಜನೆಗೆ ರಾಜ್ಯದ ಪಾಲಿನ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡುವುದು ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ₹7 ಲಕ್ಷ ಮಿತಿಯ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಜೆಡಿಎಸ್ ಮುಖಂಡರು ಜನರ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

The District Janata Dal (JDS) has called for a fight against the government

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close