ಬೈಕ್ ವೀಲಿಂಗ್ ಮಾಡಿದ್ದು ಬ್ಯಾಂಕ್ ನೌಕರ- The bike wheeling was done by a bank employee.

SUDDILIVE || SHIVAMOGGA

ಬೈಕ್ ವೀಲಿಂಗ್ ಮಾಡಿದ್ದು ಬ್ಯಾಂಕ್ ನೌಕರ- The bike wheeling was done by a bank employee





ಶಿವಮೊಗ್ಗದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ಬೈಕ್ ವೀಲಿಂಗ್ ಮಾಡಿದ ಬ್ಯಾಂಕ್ ನೌಕರನ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜೂನ್ 10ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಮಲವಗೊಪ್ಪ ಸಮೀಪದ ರಾಷ್ಟ್ರೀಯ ಹೆದ್ದಾರಿ-69ರ 3ನೇ ಕ್ರಾಸ್ ಬಳಿ ಬ್ಯಾಂಕ್ ನೌಕರ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ವೀಲಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ತನಿಖೆಯಲ್ಲಿ ವೀಲಿಂಗ್ ಮಾಡಿದ್ದ ವ್ಯಕ್ತಿಯನ್ನು 20 ವರ್ಷದ ಬ್ಯಾಂಕ್ ನೌಕರ (ಹೆಸರು ಗೌಪ್ಯವಾಗಿಡಲಾಗಿದೆ) ಎಂದು ಗುರುತಿಸಲಾಗಿದ್ದು, ಆತ ಹೊಳೆಬೆನವಳ್ಳಿ ದೊಡ್ಡತಾಂಡಾ ನಿವಾಸಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೀಲಿಂಗ್‌ಗೆ ಬಳಸಿದ್ದ ಕೆಎ-14 ಹೆಚ್‌ಇ-0823 ನೋಂದಣಿ ಸಂಖ್ಯೆಯ ಬಜಾಜ್ ಪಲ್ಸರ್ ಎನ್‌ಎಸ್-200 ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ವಾಹನ ಚಲಾಯಿಸಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 ಹಾಗೂ ಮೋಟಾರು ವಾಹನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

The bike wheeling was done by a bank employee

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close