SUDDILIVE || NAGARA
ಕೆರೆಗೆ ಉರುಳಿ ಬಿದ್ದ ಲಾರಿ-The lorry fell into the lake
ಜೂ. 28: ನಗರದ ಬಿದನೂರು ಕೋಟೆ ಕೆರೆ ಸಮೀಪ ಇಂದು ನಡೆದ ರಸ್ತೆ ಅಪಘಾತದಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಾಹಿತಿಯ ಪ್ರಕಾರ, ಶಿವಮೊಗ್ಗದಿಂದ ಬರುತ್ತಿದ್ದ ಲಾರಿಗೆ ಎದುರಿನಿಂದ ಬರುತ್ತಿದ್ದ ಬಸ್‌ಗೆ ಸೈಡ್ ನೀಡುವ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಾಹನ ನೇರವಾಗಿ ಬಿದನೂರು ಕೋಟೆ ಕೆರೆಗೆ ಉರುಳಿದೆ. ಅಪಘಾತದ ತೀವ್ರತೆಗೆ ಚಾಲಕ ಲಾರಿಯೊಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ಬೊಂಬು ಹೊತ್ತುಕೊಂಡು ಲಾರಿ ತೆರಳುತ್ತಿತ್ತು. ಈ ಘಟನೆ ನಿನ್ನೆ ಸಂಜೆ ನಡೆದಿದೆ.
The lorry fell into the lake
