SUDDILIVE || HARIHARA || CHITRADURGA
ಎರಡು ಪ್ರತ್ಯೇಕ ಲೈಂಗಿಕ ದೌರ್ಜನ್ಯ ಆರೋಪ; ಕಾನ್ ಸ್ಟೇಬಲ್ ಮತ್ತು ಎಸ್ಐ ವಿರುದ್ಧ ಎಫ್‌ಐಆರ್ ದಾಖಲು- Two Separate Sexual Assault Allegations; FIRs Registered Against a Constable and an SI
ಲೈಂಗಿಕ ದೌರ್ಜನ್ಯದ ವಿರುದ್ಧ ಎರಡು ಪ್ರಕರಣಗಳು ಬಯಲಿಗೆ ಬಂದಿದೆ. ಎರಡೂ ಪ್ರಕರಣಗಳು ಶಿವಮೊಗ್ಗದೊಂದಿಗೆ ತಳಕು ಹಾಕಿಕೊಂಡಿವೆ. ಹಾಗಾಗಿ ಎರಡು ಪ್ರಕರಣಗಳನ್ನ ಮಾಧ್ಯಮಗಳು ಪ್ರಕಟಿಸಿರುವ ಹಿನ್ನಲೆಯಲ್ಲಿ ಸುದ್ದಿಯನ್ನ ಪ್ರಕಟಿಸಲಾಗಿದೆ.
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್ ಇನ್‌ಸ್ಪೆಕ್ಟರ್ ಗಾದಿಲಿಂಗಪ್ಪ ವಿರುದ್ಧ ಬೆಂಗಳೂರಿನ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ನೀಡಿದ್ದು, ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ದೂರಿನ ಪ್ರಕಾರ, ಗಾದಿಲಿಂಗಪ್ಪ ಅವರು ಚಿತ್ರದುರ್ಗ ನಗರ ಠಾಣೆಯಲ್ಲಿ ಎಸ್‌ಐ ಆಗಿದ್ದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಿತರಾಗಿದ್ದರು. ಬಳಿಕ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿ, ಹೋಟೆಲ್ ಹಾಗೂ ಮನೆಗೆ ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ಸಂಬಂಧ ಬೆಳೆಸಿಕೊಂಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಯುವತಿಯ ದೂರಿನ ಆಧಾರದ ಮೇಲೆ ಗಾದಿಲಿಂಗಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೂಡ ಆರೋಪಗಳನ್ನು ಸೇರಿಸಿಕೊಂಡಿದ್ದಾರೆ. ಸಧ್ಯಕ್ಕೆ ಗಾದಿಲಿಂಗಪ್ಪ ಕರ್ತವ್ಯದಲ್ಲಿ ಇಲ್ಲ ಎಂದು ತಿಳಿದು ಬಂದಿದೆ.
Ksrp ಕಾನ್ ಸ್ಟೇಬಲ್ ವಿರುದ್ಧ ದೂರು
ಇನ್ನೊಂದು ಪ್ರಕರಣದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ 8 ನೇ ಬೆಟಾಲಿನ್ ಕೆಎಸ್‌ಆರ್‌ಪಿ (KSRP) ಕಾನ್ಸ್‌ಟೇಬಲ್ ಹನುಮಂತ ಸಿದ್ಧಪ್ಪನವರ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಆರೋಪಿಯು ಹಲವು ವರ್ಷಗಳಿಂದ ಮಹಿಳೆಗೆ ಕಿರುಕುಳ ನೀಡುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಸಂಬಂಧ ಬೆಳೆಸಿ, ನಂತರ ವಂಚನೆ ನಡೆಸಿರುವ ಆರೋಪವೂ ಕೇಳಿಬಂದಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದೂರಿನಲ್ಲಿ ಆರೋಪಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಪೊಲೀಸರು ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
Two Separate Sexual Assault Allegations; FIRs Registered Against a Constable and an SI
