ಕ್ರೇನ್ ಚಾಲಕನ ನಿರ್ಲಕ್ಷಕ್ಕೆ ಕಾರ್ಮಿಕ ಬಲಿ- Worker dies due to crane driver's negligence

SUDDILIVE || SHIVAMOGGA

ಕ್ರೇನ್ ಚಾಲಕನ ನಿರ್ಲಕ್ಷಕ್ಕೆ ಕಾರ್ಮಿಕ ಬಲಿ- Worker dies due to crane driver's negligence    

Worker, crane




ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ 2ನೇ ಕ್ರಾಸ್‌ನಲ್ಲಿರುವ ದೊಡ್ಡಮ್ಮ ದೇವಸ್ಥಾನದ ಗೋಪುರ ನಿರ್ಮಾಣ ಕಾಮಗಾರಿ ವೇಳೆ ನಡೆದ ದುರ್ಘಟನೆಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ನಾಗೇಶ್ (48) ಮೃತರಾಗಿದ್ದು ಜೂನ್ 5 ರಂದು ದೇವಸ್ಥಾನದ ಕೆಲಸಕ್ಕೆ ಬಂದಿದ್ದರು. ದೇವಸ್ಥಾನದ ಗೋಪುರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ ಕ್ರೇನ್ ಕಾರ್ಯಾಚರಣೆ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ದಾಖಲೆಗಳ ಪ್ರಕಾರ, ಜೂನ್ 6ರಂದು ಬೆಳಗಿನ ಜಾವ ಸುಮಾರು 4.30 ಗಂಟೆ ವೇಳೆಗೆ ಕ್ರೇನ್ ಚಾಲಕ ಜಗದೀಶ್ ಅವರು ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಕ್ರೇನ್ ಚಲಾಯಿಸಿದ ಪರಿಣಾಮ ಕ್ರೇನ್‌ನ ಚಕ್ರ ಕಾರ್ಮಿಕ ನಾಗೇಶ್ ಅವರ ಮೇಲೆ ಹರಿದಿದೆ. ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖವಾಗಿದೆ.

ಮೃತರ ಪತ್ನಿ ಕವಿತಾ ಅವರು ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 281 ಮತ್ತು 106(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಅಪಘಾತದ ನಿಖರ ಕಾರಣ ಹಾಗೂ ಜವಾಬ್ದಾರಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Worker dies due to crane driver's negligence

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close