SUDDILIVE || SHIVAMOGGA
ಜೂನ್ 23ರಂದು ಗಾಜನೂರು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ-power outage on june 23rd in Gajnuru limits
ಶಿವಮೊಗ್ಗ, ಜೂನ್ 20: ಶಿವಮೊಗ್ಗ ತಾಲ್ಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜೂನ್ 23ರಂದು (ಮಂಗಳವಾರ) ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ.
ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ಯರಗನಾಳ್, ಕುಸ್ಕೂರು, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ನಿರ್ವಹಣಾ ಕಾಮಗಾರಿ ಸುಗಮವಾಗಿ ನಡೆಯಲು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.
