SUDDILIVE || BHADRAVATHI
ಭದ್ರಾವತಿಯಲ್ಲಿ 1.31 ಕೆಜಿ ಗಾಂಜಾ ವಶಕ್ಕೆ; ಇಬ್ಬರು ಯುವಕರ ಬಂಧನ-1.31 kg of ganja seized in Bhadravati; two youths arrested
ಭದ್ರಾವತಿ: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ, ಸುಮಾರು ₹65,500 ಮೌಲ್ಯದ 1 ಕೆಜಿ 310 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಜುಲೈ 17ರಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗತಿ ಬೆಳಗಲು ಗ್ರಾಮದ ತಾಂಡಾ ಕಡೆಯಿಂದ ಭದ್ರಾವತಿ ನಗರಕ್ಕೆ ಇಬ್ಬರು ಯುವಕರು ಕಾನೂನುಬಾಹಿರವಾಗಿ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.
ಈ ಮಾಹಿತಿ ಆಧರಿಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಮಣಿಕಂಠ (19) ಹಾಗೂ ಜೀವನ್ (19) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು.
ಬಂಧಿತರಿಂದ 1 ಕೆಜಿ 310 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ₹65,500 ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 152/2026ರಡಿ ಮಾದಕ ದ್ರವ್ಯ ಮತ್ತು ಮಾನಸಿಕ ಪ್ರಭಾವಿ ಪದಾರ್ಥಗಳ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಪೊಲೀಸರು ಮಾದಕ ವಸ್ತುಗಳ ಅಕ್ರಮ ಸಾಗಣೆ ಮತ್ತು ಮಾರಾಟ ತಡೆಗೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಸಾರ್ವಜನಿಕರು ಇಂತಹ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
