ಅಕ್ರಮ ಆಸ್ತಿ ಗಳಿಕೆ ಆರೋಪ: ಶಿವಮೊಗ್ಗ ಎಸಿಎಫ್ ಮನೆ ಸೇರಿ ವಿವಿಧಡೆ ಲೋಕ ದಾಳಿ-Allegations of illegal wealth acquisition: Locals raid various places including ACF house in Shivamogga

 SUDDILIVE || SHIVAMOGGA

ಅಕ್ರಮ ಆಸ್ತಿ ಗಳಿಕೆ ಆರೋಪ: ಶಿವಮೊಗ್ಗ ಎಸಿಎಫ್ ಮನೆ ಸೇರಿ ವಿವಿಧಡೆ ಲೋಕ ದಾಳಿ-Allegations of illegal wealth acquisition: Locals raid various places including ACF house in Shivamogga    

 

Lokayukta, raid

  

ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ (Disproportionate Assets) ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ (Research & Development) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸಿಎಫ್ ಕಿರಣ್ ಅಂಗಡಿ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆಯಿಂದಲೇ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಲೋಕಾಯುಕ್ತದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸುಮಾರು 6 ಅಧಿಕಾರಿಗಳು ಹಾಗೂ 40ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದು, ವಿವಿಧ ದಾಖಲೆಗಳು, ಆಸ್ತಿ-ಪಾಸ್ತಿ ಸಂಬಂಧಿತ ಮಾಹಿತಿಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.



ಮಾಹಿತಿಯ ಪ್ರಕಾರ, ಶಿವಮೊಗ್ಗದಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಧಾರವಾಡದಲ್ಲಿರುವ ಕಿರಣ್ ಅಂಗಡಿ ಅವರ ನಿವಾಸ ಹಾಗೂ ಅವರ ಪತ್ನಿ ನಂದಾ ಅವರ ಹೆಸರಿನಲ್ಲಿರುವ ಕೈಗಾರಿಕಾ ಘಟಕದಲ್ಲಿಯೂ ಶೋಧ ಕಾರ್ಯ ಮುಂದುವರಿದಿದೆ. ಅಲ್ಲದೆ ಚಿತ್ರದುರ್ಗ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಕಿರಣ್ ಅಂಗಡಿ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇಥೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಬ್ಯಾಂಕ್ ದಾಖಲೆಗಳು, ಸ್ಥಿರಾಸ್ತಿ ದಾಖಲೆಗಳು, ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ವಿವಿಧ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ವಶಪಡಿಸಿಕೊಂಡ ದಾಖಲೆಗಳು, ಆಸ್ತಿ ವಿವರಗಳು ಹಾಗೂ ತನಿಖೆಯಲ್ಲಿ ಪತ್ತೆಯಾಗಿರುವ ಮಾಹಿತಿಯನ್ನು ಆಧರಿಸಿ ಲೋಕಾಯುಕ್ತದಿಂದ ಅಧಿಕೃತ ಮಾಹಿತಿ ಪ್ರಕಟಿಸುವ ಸಾಧ್ಯತೆಯಿದೆ.

Allegations of illegal wealth acquisition: Locals raid various places including ACF house in Shivamogga    


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close