ಶಿವಮೊಗ್ಗ ಸಿಟಿ ಬಸ್‌ಗಳಲ್ಲಿ ಸಿಸಿಟಿವಿ ಕಡ್ಡಾಯ; 'ಪಬ್ಲಿಕ್ ಐ' ಪೋಸ್ಟರ್ ಅಳವಡಿಕೆಗೆ ಜಿಲ್ಲಾ ಪೊಲೀಸರ ಸೂಚನೆ-CCTV mandatory in Shivamogga city buses; District police instructed to install 'Public Eye' posters

 SUDDILIVE || SHIVAMOGGA

ಶಿವಮೊಗ್ಗ ಸಿಟಿ ಬಸ್‌ಗಳಲ್ಲಿ ಸಿಸಿಟಿವಿ ಕಡ್ಡಾಯ; 'ಪಬ್ಲಿಕ್ ಐ' ಪೋಸ್ಟರ್ ಅಳವಡಿಕೆಗೆ ಜಿಲ್ಲಾ ಪೊಲೀಸರ ಸೂಚನೆ-CCTV mandatory in Shivamogga city buses; District police instructed to install 'Public Eye' posters

CC, TV

CC, TV

ಶಿವಮೊಗ್ಗ, ಜು.12: ನಗರದ ಸಿಟಿ ಬಸ್ ಸೇವೆಯನ್ನು ಇನ್ನಷ್ಟು ಸುರಕ್ಷಿತ ಹಾಗೂ ಸಾರ್ವಜನಿಕ ಸ್ನೇಹಿಯಾಗಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಎಲ್ಲಾ ಸಿಟಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾನ್ಯ ಶ್ರೀ ಸಂಜೀವ್ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಉಪವಿಭಾಗ ಅವರು ಭಾಗವಹಿಸಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರ ಸಮಸ್ಯೆಗಳು ಹಾಗೂ ಸಲಹೆಗಳನ್ನು ಆಲಿಸಿದರು. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಪ್ರಮುಖ ಸೂಚನೆಗಳು

  • ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
  • ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.
  • ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಹಾಗೂ ಇಳಿಸುವಂತೆ ಸೂಚಿಸಲಾಯಿತು.

'ಪಬ್ಲಿಕ್ ಐ' ಜಾಗೃತಿ ಪೋಸ್ಟರ್ ಅಳವಡಿಕೆ


ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ ಸಮಸ್ಯೆಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ "Public Eye", ಶಿವಮೊಗ್ಗ ಸಂಚಾರ ಪೊಲೀಸ್ ಸಹಾಯವಾಣಿ ಹಾಗೂ ಪೊಲೀಸ್ ತುರ್ತು ಸಹಾಯವಾಣಿ 112 ಸಂಖ್ಯೆಗಳಿರುವ ಜಾಗೃತಿ ಪೋಸ್ಟರ್‌ಗಳನ್ನು ಸಿಟಿ ಬಸ್‌ಗಳಲ್ಲಿ ಅಳವಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.

ಸಭೆಯ ಮೂಲಕ ಸುರಕ್ಷಿತ, ಶಿಸ್ತುಬದ್ಧ ಹಾಗೂ ಸಾರ್ವಜನಿಕ ಸ್ನೇಹಿ ಸಿಟಿ ಬಸ್ ಸೇವೆ ಕಲ್ಪಿಸಲು ಜಿಲ್ಲಾ ಪೊಲೀಸ್ ಇಲಾಖೆ ಬದ್ಧವಾಗಿದೆ ಎಂಬ ಸಂದೇಶವನ್ನು ಅಧಿಕಾರಿಗಳು ನೀಡಿದರು.

CCTV mandatory in Shivamogga city buses; District police instructed to install 'Public Eye' posters

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close