ಶಿವಮೊಗ್ಗ ಬಿಜೆಪಿ ಕಚೇರಿ ಎದುರು ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ-Congress-BJP workers stage a hydra in front of the BJP office in Shivamogga

 SUDDILIVE || SHIVAMOGGA

ಶಿವಮೊಗ್ಗ ಬಿಜೆಪಿ ಕಚೇರಿ ಎದುರು ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ-Congress-BJP workers stage a hydra in front of the BJP office in Shivamogga   
Drama, hydrama

ಶಿವಮೊಗ್ಗ: ನಗರದ ಬಿಜೆಪಿ ಜಿಲ್ಲಾ ಕಚೇರಿ ಎದುರು ಗುರುವಾರ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ಹೈಡ್ರಾಮಾ ನಡೆಯಿತು.

ದೆಹಲಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ ಪರೀಕ್ಷೆಯಲ್ಲಿನ ಅಕ್ರಮ, ಕೇಂದ್ರ ಸರ್ಕಾರದ ದಮನ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಆವರಣದೊಳಗೆ ಪ್ರವೇಶಿಸಲು ಯತ್ನಿಸಿದ ಹಿನ್ನೆಲೆಯಲ್ಲಿ, ಕಚೇರಿಯ ಶಟರ್‌ಗಳನ್ನು ಮುಚ್ಚಲಾಯಿತು. ಇದನ್ನು ವಿರೋಧಿಸಿದ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿದ್ದ ಡಿವೈಎಸ್‌ಪಿ ಹಾಗೂ ಪೊಲೀಸ್ ಅಧಿಕಾರಿಗಳ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸ್ಥಳಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಬಳಿಕ ಬಿಜೆಪಿ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಕಚೇರಿಯನ್ನು ಯಾರು ಬಂದ್ ಮಾಡಿಸಿದರು ಎಂದು ಪ್ರಶ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪರಿಣಾಮ, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಇತ್ತ ಬಿಜೆಪಿಯವರು ಕಾಂಗ್ರೆಸ್ ಕಚೇರಿಗೆ ನುತ್ತಿಗೆಹಾಕಲಾಗುವುದು ಎಂಬ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಗೂ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ನೆರೆದಿದ್ದ ಜನರನ್ನ ಪೊಲೀಸರು ತೆರಳಲು ಮನವಿ ಮಾಡಿಕೊಂಡಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close