ಕಾಂಗ್ರೆಸ್ ಎಸ್‌ಐಆರ್‌ನ ಉದ್ದೇಶವನ್ನೇ ಹಾಳು ಮಾಡುತ್ತಿದೆ: ಎನ್.ಕೆ. ಜಗದೀಶ್ ಆರೋಪ- Congress is sabotaging the very purpose of SIR: N.K. Jagadish alleges

 SUDDILIVE || SHIVAMOGGA

ಕಾಂಗ್ರೆಸ್ ಎಸ್‌ಐಆರ್‌ನ ಉದ್ದೇಶವನ್ನೇ ಹಾಳು ಮಾಡುತ್ತಿದೆ: ಎನ್.ಕೆ. ಜಗದೀಶ್ ಆರೋಪ- Congress is sabotaging the very purpose of SIR: N.K. Jagadish alleges  

Sir, sabotaging

ಶಿವಮೊಗ್ಗ, ಜು.11: ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ದೋಷರಹಿತವಾಗಿಸುವ ಉದ್ದೇಶದಿಂದ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ಪಕ್ಷ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಅದರ ನಿಜವಾದ ಉದ್ದೇಶವನ್ನೇ ಹಾಳು ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಎನ್.ಕೆ. ಜಗದೀಶ್ ಆರೋಪಿಸಿದ್ದಾರೆ. ಈ ಕುರಿತು ಅವರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅವರು ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಮುಖ್ಯ ಉದ್ದೇಶ ಮತದಾರರ ಪಟ್ಟಿಯಿಂದ ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ನಕಲಿ ಹೆಸರನ್ನು ತೆರವುಗೊಳಿಸಿ, ಅರ್ಹ ಮತದಾರರ ಹೆಸರು ಮಾತ್ರ ಉಳಿಯುವಂತೆ ಮಾಡುವುದು. ಇದರಿಂದ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಹೆಚ್ಚುವುದರ ಜೊತೆಗೆ ಪ್ರಜಾಪ್ರಭುತ್ವ ಇನ್ನಷ್ಟು ಬಲಗೊಳ್ಳಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರು ಜನರಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸುವ ರೀತಿಯಲ್ಲಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಿಂದ ಯಾರ ಮತದಾನದ ಹಕ್ಕನ್ನೂ ಕಸಿದುಕೊಳ್ಳುವುದಿಲ್ಲ. ಅರ್ಹ ಮತದಾರರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಮುಂದುವರಿಸಿಕೊಳ್ಳಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗವು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಅದರ ನಿಯಮಿತ ಕರ್ತವ್ಯವಾಗಿದೆ. ಇಂತಹ ಆಡಳಿತಾತ್ಮಕ ಪ್ರಕ್ರಿಯೆಯನ್ನು ರಾಜಕೀಯ ಬಣ್ಣ ಬಳಿದು ಜನರನ್ನು ದಾರಿ ತಪ್ಪಿಸುವುದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕ ಎಂದು ಜಗದೀಶ್ ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವದಲ್ಲಿ ಮತದಾರರ ಪಟ್ಟಿ ಶುದ್ಧೀಕರಣ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಇದಕ್ಕೆ ಸಹಕರಿಸಬೇಕು. ಆದರೆ ಕಾಂಗ್ರೆಸ್ ಮಾತ್ರ ಈ ಪ್ರಕ್ರಿಯೆಯನ್ನು ವಿರೋಧಿಸಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ಮತದಾರರ ಹಕ್ಕುಗಳ ರಕ್ಷಣೆಯ ಜೊತೆಗೆ ಪಾರದರ್ಶಕ ಚುನಾವಣಾ ವ್ಯವಸ್ಥೆ ನಿರ್ಮಾಣವೇ ಎಸ್‌ಐಆರ್‌ನ ಉದ್ದೇಶವಾಗಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ಬದಿಗೊತ್ತಿ ಜನರು ಸತ್ಯಾಂಶವನ್ನು ಅರಿತು ಚುನಾವಣಾ ಆಯೋಗದೊಂದಿಗೆ ಸಹಕರಿಸಬೇಕು ಎಂದು ಎನ್.ಕೆ. ಜಗದೀಶ್ ಮನವಿ ಮಾಡಿದ್ದಾರೆ.

Congress is sabotaging the very purpose of SIR: N.K. Jagadish alleges  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close