ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ: ನೀರು ಶುದ್ಧೀಕರಣ ಘಟಕಕ್ಕೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ-Drinking water problem in Shivamogga: MLA Channabasappa makes a surprise visit to the water purification plant

 SUDDILIVE || SHIVAMOGGA

ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ: ನೀರು ಶುದ್ಧೀಕರಣ ಘಟಕಕ್ಕೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ-Drinking water problem in Shivamogga: MLA Channabasappa makes a surprise visit to the water purification plant     

Drinking, water

Drinking, water

Drinking, water


ಶಿವಮೊಗ್ಗ: ನಗರದ ಹಲವಾರು ಬಡಾವಣೆಗಳಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸರಬರಾಜು ಸಮರ್ಪಕವಾಗಿ ಆಗದ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಶುಕ್ರವಾರ ಮಹಾನಗರ ಪಾಲಿಕೆಯ ಶ್ರೀ ಕೃಷ್ಣರಾಜೇಂದ್ರ (ಎಸ್‌ಕೆಆರ್) ನೀರು ಶುದ್ಧೀಕರಣ ಘಟಕಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ನೀರು ಶುದ್ಧೀಕರಣ ಪ್ರಕ್ರಿಯೆಯ ಪ್ರಮುಖ ಭಾಗವಾಗಿರುವ ಫ್ಲಾಕ್ ಲ್ಯಾಟರ್ ಸೆಂಟರ್ ಶಾಫ್ಟ್ (Flocculator Center Shaft) ವಾಲಿರುವುದು ಗಮನಕ್ಕೆ ಬಂದಿದೆ. ಈ ಶಾಫ್ಟ್ ಮೂಲಕ ನೀರು ಶುದ್ಧೀಕರಣ ಪ್ರಕ್ರಿಯೆಯಲ್ಲಿ ಮೊದಲು ನೀರು ಸ್ಥಿರಗೊಂಡು (ಸೆಟ್ಲಿಂಗ್) ಬಳಿಕ ಫಿಲ್ಟರ್ ಆಗಿ ನಗರಕ್ಕೆ ಸರಬರಾಜಾಗುತ್ತದೆ. ಆದರೆ ಶಾಫ್ಟ್ ವಾಲಿರುವುದರಿಂದ ನೀರು ಶುದ್ಧೀಕರಣ ಕಾರ್ಯಕ್ಕೆ ಅಡಚಣೆ ಉಂಟಾಗಿ, ಅದರ ಪರಿಣಾಮ ನಗರದ ಹಲವು ಪ್ರದೇಶಗಳಲ್ಲಿ ನೀರಿನ ಪೂರೈಕೆ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ ಅಧಿಕಾರಿಗಳಿಂದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ದುರಸ್ತಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಕಾಮಗಾರಿಯನ್ನು ಪೂರ್ಣಗೊಳಿಸಲು ನಾಲ್ಕು ದಿನಗಳ ಗಡುವು ನೀಡಿ, ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಅಧಿಕಾರಿಗಳು ಸಹ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು, ನಾಲ್ಕು ದಿನಗಳೊಳಗೆ ದುರಸ್ತಿ ಪೂರ್ಣಗೊಳಿಸಿ ನಗರದಲ್ಲಿ ಕುಡಿಯುವ ನೀರಿನ ಸರಬರಾಜನ್ನು ಪೂರ್ಣ ಪ್ರಮಾಣದಲ್ಲಿ ಪುನರಾರಂಭಿಸಲಾಗುವುದು ಎಂದು ಶಾಸಕರಿಗೆ ಭರವಸೆ ನೀಡಿದರು.

ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ನೀರಿನ ಸರಬರಾಜು ಸುಧಾರಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ನಂತರ ಮಾಧ್ಯಮಗಳಿಗೆ ಮಾತನಾಡಿದ ಶಾಸಕ ಚನ್ನಬಸಪ್ಪ ನಗರದಲ್ಲಿ 30 ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಇದರ ಪರ್ಯಾಯ ವ್ಯವಸ್ಥೆಯಾಗಿ ಟ್ಯಾಂಕರ್ ಗಳನ್ನು ಹೊಡೆಯಲಾಗುತ್ತಿದೆ ಟ್ಯಾಂಕರ್ ಗಳಿಗಾಗಿ  ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಕಸ ತುಂಬವ ಗಾಡಿಯಲ್ಲೂ ಸಹ ನೀರಿನ ಟ್ಯಾಂಕರ್ ಗಳ ಸಂಪರ್ಕದ ನಂಬರ್ ಗಳನ್ನು ಪ್ರಕಟಿಸಲಾಗುವುದು ನಂತರ ಮಾಧ್ಯಮಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು

Drinking water problem in Shivamogga: MLA Channabasappa makes a surprise visit to the water purification plant

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close