ವಿದ್ಯುತ್ ಬಿಲ್ ಬಾಕಿ: ತುಂಗಾ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಕಡಿತ – 7,500 ಎಕರೆ ಬೆಳೆಗಳಿಗೆ ಆತಂಕ- Electricity bill pending: Power cut to Tunga Lift Irrigation Project – Concern for 7,500 acres of crops

SUDDILIVE || SHIVAMOGGA

ವಿದ್ಯುತ್ ಬಿಲ್ ಬಾಕಿ: ತುಂಗಾ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಕಡಿತ – 7,500 ಎಕರೆ ಬೆಳೆಗಳಿಗೆ ಆತಂಕ- Electricity bill pending: Power cut to Tunga Lift Irrigation Project – Concern for 7,500 acres of crops  

Electricity, bill

ಶಿವಮೊಗ್ಗ: ವಿದ್ಯುತ್ ಬಿಲ್ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತುಂಗಾ ಏತ ನೀರಾವರಿ ಯೋಜನೆಗೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಾಗಿ ರೈತರು ಆರೋಪಿಸಿದ್ದಾರೆ. ಇದರಿಂದ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರು ಪೂರೈಕೆ ಸ್ಥಗಿತಗೊಂಡಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.

ಶಿವಮೊಗ್ಗ ತಾಲ್ಲೂಕಿನ ಹಾಯ್‌ಹೊಳೆ, ಬಾರೇಹಳ್ಳಿ ಹಾಗೂ ಗೌಡನಕೆರೆ ಸೇರಿದಂತೆ 28 ಗ್ರಾಮಗಳ ಸುಮಾರು 7,500 ಎಕರೆ ಕೃಷಿ ಭೂಮಿಗೆ ಗಾಜನೂರು ಸಮೀಪದ ತುಂಗಾ ನದಿಯಿಂದ ಜಾಕ್‌ವೆಲ್ ಮೂಲಕ ಏತ ನೀರಾವರಿ ವ್ಯವಸ್ಥೆ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕಳೆದ ಸುಮಾರು ಎಂಟು ವರ್ಷಗಳಿಂದ ಈ ಯೋಜನೆ ಕಾರ್ಯನಿರ್ವಹಿಸುತ್ತಿದೆ.

ಪ್ರತಿ ವರ್ಷ ಜೂನ್‌ನಿಂದ ಡಿಸೆಂಬರ್‌ವರೆಗೆ ನೀರನ್ನು ಎತ್ತಿ ರೈತರ ಜಮೀನುಗಳಿಗೆ ಹರಿಸಲಾಗುತ್ತದೆ. ಆದರೆ ಈ ಬಾರಿ ಸರ್ಕಾರ ವಿದ್ಯುತ್ ಬಿಲ್ ಪಾವತಿಸದ ಕಾರಣ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ. ಇದರ ಪರಿಣಾಮವಾಗಿ ನದಿಯಲ್ಲಿ ಸಮರ್ಪಕ ನೀರಿದ್ದರೂ ಜಾಕ್‌ವೆಲ್ ಮೂಲಕ ನೀರು ಎತ್ತುವುದು ಸಂಪೂರ್ಣ ಸ್ಥಗಿತಗೊಂಡಿದೆ.

ಈ ಯೋಜನೆಗೆ ಸಂಬಂಧಿಸಿದ ₹25.22 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿದಿದ್ದು, ಸರ್ಕಾರ ತಕ್ಷಣ ಬಾಕಿ ಮೊತ್ತ ಪಾವತಿಸಿ ವಿದ್ಯುತ್ ಸಂಪರ್ಕ ಮರುಸ್ಥಾಪನೆ ಮಾಡಬೇಕು ಎಂದು ತುಂಗಾ ಏತ ನೀರಾವರಿ ಸಮಿತಿ ಒತ್ತಾಯಿಸಿದೆ.

ಯೋಜನೆ ಪುನರಾರಂಭವಾಗದಿದ್ದರೆ ಸಾವಿರಾರು ರೈತರ ಬೆಳೆಗಳಿಗೆ ತೀವ್ರ ಹಾನಿಯಾಗುವ ಸಾಧ್ಯತೆ ಇದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರ ಹಿತ ಕಾಪಾಡಬೇಕೆಂದು ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಮನವಿ ನೀಡುವ ಸಂದರ್ಭದಲ್ಲಿ ಶಾಸಕಿ ಶಾರದ ಪೂರ್ಯನಾಯ್ಕ, ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜ್ ಮೊದಲಾದವರು ಉಪಸ್ಥಿತರಿದ್ದರು. 

Electricity bill pending: Power cut to Tunga Lift Irrigation Project – Concern for 7,500 acres of crops

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close