ಐದು ವರ್ಷ ಹಿಂದಿನ ದರೋಡೆ ಪ್ರಕರಣ: ಓರ್ವ ಆರೋಪಿಗೆ 7 ವರ್ಷ ಜೈಲು ಶಿಕ್ಷೆ-Five-year-old robbery case: One accused sentenced to 7 years in prison

 SUDDILIVE || SHIVAMOGGA

ಐದು ವರ್ಷ ಹಿಂದಿನ ದರೋಡೆ ಪ್ರಕರಣ: ಓರ್ವ ಆರೋಪಿಗೆ 7 ವರ್ಷ ಜೈಲು ಶಿಕ್ಷೆ-Five-year-old robbery case: One accused sentenced to 7 years in prison    

Robbery, accused

ಶಿವಮೊಗ್ಗ: ಐದು ವರ್ಷದ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಹತ್ತಿರ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.

2021ರ ಮೇ 4ರಂದು ರಾತ್ರಿ ಸುಮಾರು 2.45ರ ವೇಳೆಗೆ ಆರೋಪಿ ಮೊಹಮ್ಮದ್ ನೂರುಲ್ಲಾ, ಮೊಹಮ್ಮದ್ ತಬರಕ್ ಉಲ್ಲಾ ಹಾಗೂ ಸೈಯದ್ ಅಹಮ್ಮದ್ ಎಂಬುವರು ದೂರುದಾರರ ಬಳಿ ಚಾಕು ತೋರಿಸಿ ಬೆದರಿಕೆ ಹಾಕಿ ₹500 ನಗದು ಹಾಗೂ ₹12,000 ಮೌಲ್ಯದ ಮೊಬೈಲ್ ಫೋನ್ ದರೋಡೆ ಮಾಡಿದ್ದರು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ತನಿಖಾಧಿಕಾರಿಗಳಾದ ಸಂಜೀವ್ ಕುಮಾರ್ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಆರೋಪಿ ಮೊಹಮ್ಮದ್ ನೂರುಲ್ಲಾ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Five-year-old robbery case: One accused sentenced to 7 years in prison    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close