ಅಜ್ಜಿ ಕೊಲೆ ಪ್ರಕರಣ-ಎಸ್ಪಿ ಮಾಧ್ಯಮಗಳಿಗೆ ಮಾಹಿತಿ- Grandma's murder case - SP informs media

 SUDDILIVE || SHIVAMOGGA

ಅಜ್ಜಿ ಕೊಲೆ ಪ್ರಕರಣ-ಎಸ್ಪಿ ಮಾಧ್ಯಮಗಳಿಗೆ ಮಾಹಿತಿ-  Grandma's murder case - SP informs media  

Grand, Mother


ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಳ್ಳಗಟ್ಟ ಪ್ರದೇಶದಲ್ಲಿ ವೃದ್ಧೆ ಸುಶೀಲಮ್ಮ ಅವರ ಕೊಲೆ ಪ್ರಕರಣದ ಆರೋಪಿ ಕಿಶೋರ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಆರೋಪಿಯು ಮಾರಣಾಂತಿಕವಾಗಿ ದಾಳಿ ನಡೆಸಿದ ಘಟನೆ ನಡೆದಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾಹಿತಿ ನೀಡಿದ್ದು, ಆರೋಪಿ ಕಿಶೋರ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಗಣೇಶ್ ಅವರ ಮೇಲೆ ಲಾಂಗ್ ಮಾದರಿಯ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಕಲ್ಲು ತೆಗೆದು ಸಿಬ್ಬಂದಿಯ ತಲೆಗೆ ಹೊಡೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಿ ಆರೋಪಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಇನ್‌ಸ್ಪೆಕ್ಟರ್ ಸತ್ಯನಾರಾಯಣ್ ಅವರು ಮೊದಲು ಗಾಳಿಯಲ್ಲಿ ಒಂದು ಸುತ್ತು (ಏರ್ ಫೈರ್) ಗುಂಡು ಹಾರಿಸಿದ್ದಾರೆ. ಆದರೂ ಆರೋಪಿ ಶರಣಾಗದ ಹಿನ್ನೆಲೆಯಲ್ಲಿ ಆತನ ಎಡ ಕಾಲಿಗೆ ಒಂದು ಸುತ್ತು ಗುಂಡು ಹಾರಿಸಲಾಗಿದೆ.

ಗುಂಡೇಟಿಗೆ ಗಾಯಗೊಂಡ ಆರೋಪಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಅಜ್ಜಿ ಹತ್ಯೆ ಪ್ರಕರಣಕ್ಕೆ ಕಾರಣಗಳೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Grandma's murder case - SP informs media  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close