ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಮುಖ್ಯ ಶಿಕ್ಷಕ ಸಾವು-Headmaster dies in head-on collision between bikes

SUDDILIVE || ANANDAPURAM

ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಮುಖ್ಯ ಶಿಕ್ಷಕ ಸಾವು-Headmaster dies in head-on collision between bikes    
Head, Master






ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟಿರುವ ದುರ್ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತರನ್ನು ಹೊಸನಗರ ತಾಲ್ಲೂಕಿನ ಆಲಗೇರಿ ಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕರಾಗಿದ್ದ ಹಾಗೂ ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿ ನಾರಾಯಣಪ್ಪ (58) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ನಾರಾಯಣಪ್ಪ ಅವರು ಶಾಲೆಯ ಕರ್ತವ್ಯ ಮುಗಿಸಿಕೊಂಡು ತಮ್ಮ ಬೈಕ್‌ನಲ್ಲಿ ನೇದರವಳ್ಳಿಯಲ್ಲಿರುವ ಮನೆಗೆ ತೆರಳುತ್ತಿದ್ದರು. ಈ ವೇಳೆ ನೇದರವಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಮತ್ತೊಂದು ಬೈಕ್ ಅವರ ಬೈಕ್‌ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಪರಿಣಾಮ ನಾರಾಯಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆ ಸಂಬಂಧ ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Headmaster dies in head-on collision between bikes 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close