ಸಾಗರದಲ್ಲಿ ಭಾರಿ ಮಳೆ: ನಾಳೆ ತಾಲೂಕಿನ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ- Heavy rain in Sagara: Holiday for all schools and colleges in the taluk tomorrow

 SUDDILIVE || SHIVAMOGGA

ಸಾಗರದಲ್ಲಿ ಭಾರಿ ಮಳೆ: ನಾಳೆ ತಾಲೂಕಿನ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ- Heavy rain in Sagara: Holiday for all schools and colleges in the taluk tomorrow   

Heavy, rain

ಸಾಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 8, 2026 (ಬುಧವಾರ) ರಜೆ ಘೋಷಿಸಲಾಗಿದೆ.

ತಹಶೀಲ್ದಾರ್ ಡಾ. ಪ್ರತಿಭಾ ಆದೇಶ ಹೊರಡಿಸಿದ್ದು, ಮಳೆ ಮುಂದುವರಿಯುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೋಷಕರು ಮಕ್ಕಳನ್ನು ಹಳ್ಳ, ಹೊಳೆ, ನದಿ ಹಾಗೂ ಜಲಾವೃತ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Heavy rain in Sagara: Holiday for all schools and colleges in the taluk tomorrow  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close