ಶೃಂಗೇರಿಯಲ್ಲಿ ಧಾರಾಕಾರ ಮಳೆ: ತುಂಗಾ ಜಲಾಶಯದ 22 ಗೇಟ್‌ಗಳು ತೆರೆದು 25,600 ಕ್ಯೂಸೆಕ್ ನೀರು ಬಿಡುಗಡೆ-Heavy rains in Sringeri: 22 gates of Tunga reservoir opened, releasing 25,600 cusecs of water

 SUDDILIVE || SHIVAMOGGA

ಶೃಂಗೇರಿಯಲ್ಲಿ ಧಾರಾಕಾರ ಮಳೆ: ತುಂಗಾ ಜಲಾಶಯದ 22 ಗೇಟ್‌ಗಳು ತೆರೆದು 25,600 ಕ್ಯೂಸೆಕ್ ನೀರು ಬಿಡುಗಡೆ-Heavy rains in Sringeri: 22 gates of Tunga reservoir opened, releasing 25,600 cusecs of water    
Heavy, rain

ಶಿವಮೊಗ್ಗ: ಮಲೆನಾಡಿನ ಶೃಂಗೇರಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ತುಂಗಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಶಿವಮೊಗ್ಗ ಸಮೀಪದ ತುಂಗಾ ಜಲಾಶಯಕ್ಕೆ ಒಳಹರಿವು ಏರಿಕೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ 22 ಗೇಟ್‌ಗಳನ್ನು ಅರ್ಧ ಮೀಟರ್‌ ಎತ್ತರಕ್ಕೆ ತೆರೆಯಲಾಗಿದೆ.

ಜಲಾಶಯದ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಪ್ರಸ್ತುತ ಜಲಾಶಯಕ್ಕೆ 27,924 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 25,600 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹೊರಬಿಡಲಾಗುತ್ತಿದೆ. ಮಳೆ ಇದೇ ರೀತಿ ಮುಂದುವರಿದರೆ ಒಳಹರಿವು 50 ಸಾವಿರ ಕ್ಯೂಸೆಕ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನದಿ ಪಾತ್ರದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ನದಿ ತೀರ ಮತ್ತು ನದಿ ಮಧ್ಯದಲ್ಲಿ ಓಡಾಟ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಧಿಕಾರಿಗಳ ಪ್ರಕಾರ, ನೀರಿನ ಹರಿವು ಇನ್ನಷ್ಟು ಹೆಚ್ಚಾದರೂ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಈಗಿನಿಂದಲೇ ಹಂತ ಹಂತವಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಆದ್ದರಿಂದ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲದಿದ್ದರೂ, ನದಿ ತೀರದ ನಿವಾಸಿಗಳು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ತುಂಗಾ ನದಿಯ ನೀರಿನ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯವಿದ್ದರೆ ಮತ್ತಷ್ಟು ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ.

Heavy rains in Sringeri: 22 gates of Tunga reservoir opened, releasing 25,600 cusecs of water 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close