SUDDILIVE || SHIVAMOGGA
ಶಿವಮೊಗ್ಗ ಜಿಲ್ಲೆಯ 3 ತಾಲ್ಲೂಕುಗಳಿಗೆ ಜುಲೈ 7ರಂದು ರಜೆ - Holiday for 3 taluks of Shivamogga district on July 7th
ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮೂರು ತಾಲೂಕುಗಳಲ್ಲಿ ಜುಲೈ 7ರಂದು ರಜೆ (ಘೋಷಣೆ) ಮಾಡಿ ಆಯಾ ತಹಾಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.
ಎಲ್ಲೆಲ್ಲಿ ರಜೆ ಘೋಷಣೆ?
- ತೀರ್ಥಹಳ್ಳಿ: ಅಂಗನವಾಡಿ, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.
- ಹೊಸನಗರ: ಅಂಗನವಾಡಿ, ಶಾಲೆಗಳು ಮತ್ತು ಪಿ.ಯು ಕಾಲೇಜುಗಳಿಗೆ ತಹಶೀಲ್ದಾರ್ ಭರತ್ ರಾಜ್ ರಜೆ ಘೋಷಿಸಿದ್ದಾರೆ.
- ಸಾಗರ: ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ.
Holiday for 3 taluks of Shivamogga district on July 7th
