SUDDILIVE || HOSANAGARA || THIRTHAHALLI|| SORABA
ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ; ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಆದೇಶ-Holiday for schools and colleges in Shivamogga district tomorrow due to heavy rain; orders issued in Soraba, Thirthahalli, Hosanagar
ಶಿವಮೊಗ್ಗ, ಜು. 7: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 (ಬುಧವಾರ) ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲ್ಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೊರಬ ತಾಲ್ಲೂಕಿನಲ್ಲಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಜುಲೈ 8ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ರಜೆ ದಿನದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಂಡು ನಡೆಸುವಂತೆ ಸೂಚಿಸಲಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಹ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಿಗೆ ಜುಲೈ 8ರಂದು ರಜೆ ಘೋಷಿಸಲಾಗಿದೆ. ರಜೆ ದಿನದ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ.
ಇದೇ ವೇಳೆ ಹೊಸನಗರ ತಾಲ್ಲೂಕಿನ ತಹಶೀಲ್ದಾರ್ ಭರತ್ ರಾಜ್ ಅವರು ಸಹ ಭಾರಿ ಮಳೆಯ ಹಿನ್ನೆಲೆ ಅಂಗನವಾಡಿ, ಹಿರಿಯ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 8ರಂದು ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ. ಈಗಾಗಲೇ ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮಳೆ ಹೀಗೆ ಬೆಳಗ್ಗೆಯ ವರೆಗೆ ಮುಂದುವರೆದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆ ಕಾಲೇಜಿಗೆ ರಜೆ ಘೋಷಿಸುವ ನಿರೀಕ್ಷೆಯಿದೆ.
