ನಿರಂತರ ಮಳೆಗೆ ಮನೆ ಕುಸಿತ: ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೇಶ್ ಭೇಟಿ- House collapses due to continuous rain: Congress leader H.C. Yogesh visits the spot

SUDDILIVE || SHIVAMOGGA

ನಿರಂತರ ಮಳೆಗೆ ಮನೆ ಕುಸಿತ: ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೇಶ್ ಭೇಟಿ- House collapses due to continuous rain: Congress leader H.C. Yogesh visits the spot   

House, collapse

ಶಿವಮೊಗ್ಗ: ನಗರದ ಬೈಪಾಸ್ ಪ್ರದೇಶದಲ್ಲಿ ನಿರಂತರ ಮಳೆಯಿಂದ ಮನೆ ಕುಸಿದಿರುವ ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೇಶ್ ಅವರು ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲ್ಲಿಮ್ ಉಲ್ಲಾ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದ ಯೋಗೇಶ್, ಘಟನೆಯಿಂದ ಉಂಟಾದ ಹಾನಿಯ ಬಗ್ಗೆ ಮಾಹಿತಿ ಪಡೆದು ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ಬಳಿಕ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಸಂತ್ರಸ್ತ ಕುಟುಂಬಕ್ಕೆ ಅಗತ್ಯ ತುರ್ತು ನೆರವು, ಸುರಕ್ಷಿತ ಆಶ್ರಯ ಹಾಗೂ ಸರ್ಕಾರದ ನಿಯಮಾನುಸಾರ ದೊರೆಯಬೇಕಾದ ಪರಿಹಾರವನ್ನು ಯಾವುದೇ ವಿಳಂಬವಿಲ್ಲದೆ ಒದಗಿಸುವಂತೆ ಮನವಿ ಮಾಡಿದರು.

ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಅಪಾಯದ ಅಂಚಿನಲ್ಲಿರುವ ಮನೆಗಳು ಹಾಗೂ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳ ಗಮನ ಸೆಳೆದರು.

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಡಳಿತವು ತ್ವರಿತವಾಗಿ ಸ್ಪಂದಿಸುವುದು ಅತ್ಯಗತ್ಯವಾಗಿದ್ದು, ಸಂತ್ರಸ್ತ ಕುಟುಂಬಕ್ಕೆ ಅಗತ್ಯ ನೆರವು ಶೀಘ್ರವಾಗಿ ದೊರೆಯುವಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಎಚ್.ಸಿ. ಯೋಗೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲ್ಲಿಮ್ ಉಲ್ಲಾ, ಸ್ಥಳೀಯ ನಿವಾಸಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

House collapses due to continuous rain: Congress leader H.C. Yogesh visits the spot

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close