ಭಾರಿ ಮಳೆಯಿಂದ ಮನೆ ಹಾನಿ: ಸ್ಥಳಕ್ಕೆ ತಹಸಿಲ್ದಾರ್ ಡಾ. ಪ್ರತಿಭಾ ಆರ್ ಭೇಟಿ – ಸಂತ್ರಸ್ತರಿಗೆ ಪರಿಹಾರದ ಭರವಸೆ-House damage due to heavy rain: Tehsildar Dr. Pratibha R visits the spot – promises compensation to the victims

 SUDDILIVE || SAGARA

ಭಾರಿ ಮಳೆಯಿಂದ ಮನೆ ಹಾನಿ: ಸ್ಥಳಕ್ಕೆ ತಹಸಿಲ್ದಾರ್ ಡಾ. ಪ್ರತಿಭಾ ಆರ್ ಭೇಟಿ – ಸಂತ್ರಸ್ತರಿಗೆ ಪರಿಹಾರದ ಭರವಸೆ-House damage due to heavy rain: Tehsildar Dr. Pratibha R visits the spot – promises compensation to the victims    

House, damage

ಸಾಗರ: ಸಾಗರ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ತಹಸಿಲ್ದಾರ್ ಡಾ. ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕತ್ತಲೆ ಬಜಾರ್‌ನ ಜೆಪಿ ನಗರದಲ್ಲಿ ಕರೀಂ ಸಾಬ್ ಅವರ ಮನೆ ಮಳೆಯಿಂದ ಹಾನಿಗೊಳಗಾದ ಹಿನ್ನೆಲೆಯಲ್ಲಿ ತಹಸಿಲ್ದಾರ್ ಡಾ. ಪ್ರತಿಭಾ ಆರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕ್ಷೇತ್ರದಲ್ಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿದ್ದು, ಹಾನಿ ಪರಿಶೀಲನೆ ನಡೆಸಿ ತುರ್ತು ನೆರವು ಹಾಗೂ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

24 ಗಂಟೆ ಕಂಟ್ರೋಲ್ ರೂಂ ಆರಂಭ

ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ತಾಲೂಕು ಆಡಳಿತದಿಂದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ವ್ಯವಸ್ಥೆ ಮಾಡಲಾಗಿದೆ. ಪ್ರಕೃತಿ ವಿಕೋಪದಿಂದ ಯಾವುದೇ ತೊಂದರೆ ಎದುರಾದರೆ ಸಾರ್ವಜನಿಕರು 08183-226074 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಹಸಿಲ್ದಾರ್ ತಿಳಿಸಿದ್ದಾರೆ.

ತಹಸಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿಕೆ

"ಸಾಗರ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂದಾಯ ಅಧಿಕಾರಿಗಳಿಗೆ ಕ್ಷೇತ್ರದಲ್ಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಹಾನಿಗೊಳಗಾದವರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕು ಆಡಳಿತದಿಂದ 24 ಗಂಟೆಗಳ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಿದರೆ ಕೂಡಲೇ ಅಗತ್ಯ ನೆರವು ನೀಡಲಾಗುವುದು" ಎಂದು ತಹಸಿಲ್ದಾರ್ ಡಾ. ಪ್ರತಿಭಾ ಆರ್ ತಿಳಿಸಿದ್ದಾರೆ.

House damage due to heavy rain: Tehsildar Dr. Pratibha R visits the spot – promises compensation to the victims 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close