ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವು ಏರಿಕೆ-Inflows of Linganamakki, Tunga, Bhadra reservoirs increase

SUDDILIVE || SHIVAMOGGA

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವು ಏರಿಕೆ-Inflows of Linganamakki, Tunga, Bhadra reservoirs increase

Inflow, dam


ಶಿವಮೊಗ್ಗ, ಜು.7: ಮಲೆನಾಡು ಭಾಗದಲ್ಲಿ ಮಳೆ ತೀವ್ರಗೊಂಡಿರುವ ಪರಿಣಾಮ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ಜಲಾಶಯಗಳ ಒಳಹರಿವು ಹೆಚ್ಚಳವಾಗಿದ್ದು, ನೀರಿನ ಮಟ್ಟವೂ ಏರಿಕೆಯಾಗಿದೆ.

ಲಿಂಗನಮಕ್ಕಿ ಜಲಾಶಯ:
ಮಂಗಳವಾರದ ಮಾಹಿತಿ ಪ್ರಕಾರ ಜಲಾಶಯದ ನೀರಿನ ಮಟ್ಟ 1754.40 ಅಡಿ ದಾಖಲಾಗಿದೆ. ಕಳೆದ ವರ್ಷದ ಇದೇ ದಿನ 1793.65 ಅಡಿ ನೀರಿನ ಮಟ್ಟವಿತ್ತು. ಜಲಾಶಯಕ್ಕೆ 29,043 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 434 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ 128.4 ಮಿ.ಮೀ. ಮಳೆಯಾಗಿದೆ.

ತುಂಗಾ ಜಲಾಶಯ:
ಬೆಳಿಗ್ಗೆ 8 ಗಂಟೆಯ ವೇಳೆಗೆ ತುಂಗಾ ಜಲಾಶಯಕ್ಕೆ 29,987 ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ನದಿಗೆ 27,760 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಟ್ಟು ಹೊರಹರಿವು 29,987 ಕ್ಯೂಸೆಕ್ ಆಗಿದೆ.

ಭದ್ರಾ ಜಲಾಶಯ:
ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದುಪ್ಪಟ್ಟು ಏರಿಕೆಯಾಗಿದೆ. ಸೋಮವಾರ ಬೆಳಿಗ್ಗೆ 4,135 ಕ್ಯೂಸೆಕ್ ಇದ್ದ ಒಳಹರಿವು, ಮಂಗಳವಾರ ಬೆಳಿಗ್ಗೆ 8,117 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಪರಿಣಾಮವಾಗಿ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಸುಮಾರು ಒಂದು ಅಡಿ ಹೆಚ್ಚಳವಾಗಿದೆ.

ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಲಾಶಯಗಳ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

Inflows of Linganamakki, Tunga, Bhadra reservoirs increase

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close