SUDDILIVE || SHIVAMOGGA
ಜುಲೈ 29 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ-Live interview at the District Employment Exchange Office on July 29th
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದ್ದುಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ - 577205 ಇಲ್ಲಿ
ಸಂದರ್ಶನಕ್ಕೆ ಹಾಜರಾಗಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9380663606, 9108235132 ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
Live interview at the District Employment Exchange Office on July 29th

