ಪ್ರೀತಿಸಿ ಮದುವೆಯಾಗಿದ್ದ ವಿವಾಹಿತ ಮಹಿಳೆ ನೇಣಿಗೆ ಶರಣು-ಪತಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು-Married woman hangs herself; police lay a trap to arrest her husband

SUDDILIVE || SHIVAMOGGA

ಪ್ರೀತಿಸಿ ಮದುವೆಯಾಗಿದ್ದ ವಿವಾಹಿತ ಮಹಿಳೆ ನೇಣಿಗೆ ಶರಣು-ಪತಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು-Married woman hangs herself; police lay a trap to arrest her husband     

Married, woman

ಶಿವಮೊಗ್ಗ: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಬೆಳಕಿಗೆ ಬಂದಿದ್ದು, ಮೃತೆಯ ಕುಟುಂಬದ ದೂರಿನ ಮೇರೆಗೆ ಪತಿ ವಿರುದ್ಧ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲು ದೊಡ್ಡಪೇಟೆ ಪೊಲೀಸರು ಬಲೆ ಬೀಸಿದ್ದಾರೆ.

ಮೃತೆಯನ್ನು ನಂದಿನಿ (24) ಎಂದು ಗುರುತಿಸಲಾಗಿದೆ. ನಂದಿನಿ ಮೂಲತಃ ಶಿವಮೊಗ್ಗದ ಶರಾವತಿ ನಗರದ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಶಿಕಾರಿಪುರ ಮೂಲದ ಸ್ಟೀವನ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ಮದುವೆಯ ಬಳಿಕ ದಂಪತಿ ಎರಡು ವರ್ಷ ಶಿಕಾರಿಪುರದಲ್ಲಿ ವಾಸವಿದ್ದು, ನಂತರ ಉದ್ಯೋಗದ ನಿಮಿತ್ತ ಶಿವಮೊಗ್ಗಕ್ಕೆ ಸ್ಥಳಾಂತರಗೊಂಡಿದ್ದರು.

ಸ್ಟೀವನ್ ನಗರದ ಎನ್ ಟಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ನಂದಿನಿ ನಗರದ ಮೆಗ್ಗಾನ್ ಆಸ್ಪತ್ರೆಯೊಂದರಲ್ಲಿ ಡೇಟಾ ಎಂಟ್ರಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.




ಗಂಡನಿಂದ ನಿರಂತರ ಕಿರುಕುಳ ಆರೋಪ

ಮೃತೆಯ ಕುಟುಂಬದ ಆರೋಪದ ಪ್ರಕಾರ, ಮದುವೆಯಾದ ನಂತರದಿಂದಲೇ ಸ್ಟೀವನ್ ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. "ಅಡುಗೆ ಸರಿಯಾಗಿ ಮಾಡುವುದಿಲ್ಲ", "ನೀನು ನನಗೆ ಬೇಡ", "ನಿನ್ನ ತಂದೆ ಮದುವೆಯಲ್ಲಿ ಏನೂ ಕೊಟ್ಟಿಲ್ಲ" ಎಂಬ ಮಾತುಗಳ ಮೂಲಕ ಅವಮಾನಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ಕಾರಣದಿಂದ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿದ್ದು, ಈ ಕಿರುಕುಳವೇ ನಂದಿನಿ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಕರಣ ದಾಖಲು – ಆರೋಪಿಗಾಗಿ ಶೋಧ

ಘಟನೆಗೆ ಸಂಬಂಧಿಸಿದಂತೆ ಮೃತೆಯ ಕುಟುಂಬ ನೀಡಿದ ದೂರಿನ ಆಧಾರದಲ್ಲಿ ಪತಿ ಸ್ಟೀವನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆ ಬಳಿಕ ಆತ ತಲೆಮರೆಸಿಕೊಂಡಿರುವ ಸಾಧ್ಯತೆಯಿದ್ದು, ಬಂಧನಕ್ಕಾಗಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.

Married woman hangs herself; police lay a trap to arrest her husband 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close