SUDDILIVE || SUDDILIVE
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತರಿಂದ ಗಾಂಜಾ ಸೇವನೆ ಪತ್ತೆ- Minors found consuming marijuana within Agumbe police station limits
ತೀರ್ಥಹಳ್ಳಿ: ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಗಾಂಜಾ ಸೇವಿಸಿರುವುದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಆರಂಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವ ಬಗ್ಗೆ ಮಾಹಿತಿ ಹರಿದಾಡಿದರೂ, ಬಳಿಕ ಪೊಲೀಸ್ ಮೂಲಗಳಿಂದ ಲಭ್ಯವಾದ ಮಾಹಿತಿಯ ಪ್ರಕಾರ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನೊಬ್ಬ ಭಾಗಿಯಾಗಿರುವುದು ದೃಢಪಟ್ಟಿದೆ.
ಪ್ರಾಥಮಿಕ ಮಾಹಿತಿಯಂತೆ, ಘಟನೆ ಕಾಲೇಜು ಆವರಣದಲ್ಲಿ ನಡೆದಿಲ್ಲ. ಬದಲಾಗಿ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮೇಗರವಳ್ಳಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕ ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆರಂಭದಲ್ಲಿ ಮೂವರು ಯುವಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ಇದ್ದರೂ, ಬಳಿಕ ಒಬ್ಬ ಅಪ್ರಾಪ್ತನ ಕುರಿತು ಮಾತ್ರ ದೃಢ ಮಾಹಿತಿ ಲಭ್ಯವಾಗಿದೆ.
ಈ ಘಟನೆ ಮಲೆನಾಡಿನ ಗ್ರಾಮೀಣ ಪ್ರದೇಶಗಳಿಗೂ ಮಾದಕ ವಸ್ತುಗಳ ಕಾಟ ವ್ಯಾಪಿಸುತ್ತಿರುವ ಆತಂಕವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಅಪ್ರಾಪ್ತರಲ್ಲಿ ಮಾದಕ ವಸ್ತುಗಳ ಬಳಕೆ ತಡೆಯಲು ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಜಾಗೃತಿ ಮೂಡಿಸುವ ಅಗತ್ಯವಿದೆ.
ಸೂಚನೆ: ಪ್ರಕರಣದಲ್ಲಿ ಅಪ್ರಾಪ್ತರು ಭಾಗಿಯಾಗಿರುವುದರಿಂದ ಅವರ ಹೆಸರು, ಗುರುತು ಅಥವಾ ಇತರೆ ವೈಯಕ್ತಿಕ ಮಾಹಿತಿಯನ್ನು ಪ್ರಕಟಿಸಲಾಗಿಲ್ಲ.
Minors found consuming marijuana within Agumbe police station limits
