ಅಗ್ನಿಶಾಮಕ ದಳದಿಂದ ಅಣಕು ಅಗ್ನಿ ಅವಘಡ (Mock Drill)- Mock Fire Drill by Fire Department

 SUDDILIVE || SHIVAMOGGA

ಅಗ್ನಿಶಾಮಕ ದಳದಿಂದ ಅಣಕು ಅಗ್ನಿ ಅವಘಡ (Mock Drill)- Mock Fire Drill by Fire Department    

Mock, drill

ಶಿವಮೊಗ್ಗ, ಜುಲೈ 2: ಸಾರ್ವಜನಿಕರಲ್ಲಿ ಅಗ್ನಿ ಅವಘಡಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಿವಮೊಗ್ಗ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ನಗರದ ಶಿವಪ್ಪ ನಾಯಕ ಬ್ಯಾರಿ ಮಾಲ್‌ನಲ್ಲಿ ಗುರುವಾರ ಅಣಕು ಅಗ್ನಿ ಅವಘಡ (Mock Drill) ನಡೆಸಿತು.

ರಾಜ್ಯದಾದ್ಯಂತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರ (DGP) ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿಯೂ ಈ ಅಣಕು ಪ್ರದರ್ಶನವನ್ನು ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ವಿವಿಧ ಕಡೆಗಳಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ, ಬೆಂಕಿ ಕಾಣಿಸಿಕೊಂಡಾಗ ಹೇಗೆ ತುರ್ತು ಕ್ರಮ ಕೈಗೊಳ್ಳಬೇಕು, ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ವಿಧಾನ, ಅಗ್ನಿಶಾಮಕ ಸಾಧನಗಳ ಬಳಕೆ ಹಾಗೂ ಸ್ವಯಂ ರಕ್ಷಣೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲಾಯಿತು.

ಅಗ್ನಿಶಾಮಕ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಪ್ರದರ್ಶಿಸಿ, ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಮಾಲ್ ಸಿಬ್ಬಂದಿ ಹಾಗೂ ಸಾರ್ವಜನಿಕರೂ ಈ ಅಣಕು ಪ್ರದರ್ಶನದಲ್ಲಿ ಭಾಗವಹಿಸಿ ಅಗ್ನಿ ಅವಘಡ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದರು.

ಅಗ್ನಿ ಅವಘಡಗಳಲ್ಲಿ ಜೀವಹಾನಿ ಮತ್ತು ಆಸ್ತಿ ನಷ್ಟವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಇದೇ ಮಾದರಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

Mock Fire Drill by Fire Department

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close