ಹೊಸನಗರದಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆಗಾಗಿ ನಗರದ ನಿತಿನ್ ನೇತೃತ್ವದಲ್ಲಿ ನಾಳೆ ಉಪವಾಸ ಸತ್ಯಾಗ್ರಹ; ಬಾಣಂತಿ ಸುಮಾ ಸಾವಿಗೆ ನ್ಯಾಯ ನೀಡುವಂತೆ ಆಗ್ರಹ-Nagar Nitin to lead hunger strike tomorrow for well-equipped maternity hospital in Hosanagar; demand justice for Bananti Suma's death

 SUDDILIVE || SHIVAMOGGA

ಹೊಸನಗರದಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆಗಾಗಿ ನಗರದ ನಿತಿನ್ ನೇತೃತ್ವದಲ್ಲಿ ನಾಳೆ ಉಪವಾಸ ಸತ್ಯಾಗ್ರಹ; ಬಾಣಂತಿ ಸುಮಾ ಸಾವಿಗೆ ನ್ಯಾಯ ನೀಡುವಂತೆ ಆಗ್ರಹ-Nagar Nitin to lead hunger strike tomorrow for well-equipped maternity hospital in Hosanagar; demand justice for Bananti Suma's death    

Nagara, nithin

ಹೊಸನಗರ: ತಾಲ್ಲೂಕಿನಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ಆರಂಭಿಸಬೇಕು ಹಾಗೂ ಇತ್ತೀಚೆಗೆ ಹೆರಿಗೆಯ ಸಂದರ್ಭದಲ್ಲಿ ಮೃತಪಟ್ಟ ಬಾಣಂತಿ ಸುಮಾ ಅವರ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ನಾಳೆ ಜುಲೈ 18 ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ಸಾಮಾಜಿಕ ಹೋರಾಟಗಾರ ನಗರ ನಿತಿನ್ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ. ಹೊಸನಗರ ತಾಲ್ಲೂಕಿನ ಗರ್ಭಿಣಿಯರು ಪ್ರತಿ ವರ್ಷ ಹೆರಿಗೆ ಮತ್ತು ತುರ್ತು ಚಿಕಿತ್ಸೆಗಳಿಗಾಗಿ ಸಾಗರ, ತೀರ್ಥಹಳ್ಳಿ ಹಾಗೂ ಶಿಕಾರಿಪುರ ಸೇರಿದಂತೆ ಪಕ್ಕದ ತಾಲ್ಲೂಕುಗಳ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುತ್ತಿದೆ. ಆದ್ದರಿಂದ ಸುಸಜ್ಜಿತ ಹೆರಿಗೆ ಆಸ್ಪತ್ರೆ ಬೇಕೆಂದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ. 

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಕೆಲವು ಗರ್ಭಿಣಿಯರು ಹೆರಿಗೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಮರುಕಳಿಸುತ್ತಿವೆ. ಹೊಸನಗರ ತಾಲ್ಲೂಕು ಆಸ್ಪತ್ರೆಯಲ್ಲಿಯೇ ಅಗತ್ಯ ಸೌಲಭ್ಯಗಳು ಮತ್ತು ಪರಿಣತ ವೈದ್ಯರು ಲಭ್ಯವಿದ್ದರೆ ಇಂತಹ ಅನಾಹುತಗಳನ್ನು ತಪ್ಪಿಸಬಹುದಾಗಿತ್ತು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಅದುದರಿಂದ ನಗರದ ನಿತಿನ್ ಅವರ ನೇತೃತ್ವದ ನಾಳೆಯ ಉಪವಾಸ ಹೋರಾಟ ಗಮನಸೆಳೆದಿದೆ.

ಇದೇ ವೇಳೆ, ತಾಲ್ಲೂಕಿನ ಸುಮಾರು 80 ಶೇಕಡಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿಯ ಕೊರತೆ ಎದುರಿಸುತ್ತಿದೆ. ಹೊಸನಗರದ ಹಲವು ಗ್ರಾಮಗಳು ದುರ್ಗಮ ಪ್ರದೇಶಗಳಾಗಿದ್ದು, ಮೊಬೈಲ್ ನೆಟ್ವರ್ಕ್ ಮತ್ತು ಸಮರ್ಪಕ ಸಾರಿಗೆ ವ್ಯವಸ್ಥೆಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ಸ್ಥಳೀಯರಿಗೆ ತಕ್ಷಣ ಚಿಕಿತ್ಸೆ ದೊರೆಯದೆ ಜೀವಹಾನಿ ಸಂಭವಿಸುತ್ತಿದೆ. ಹಾಗಾಗಿ ತಾಲೂಕಿನಲ್ಲಿ ಪ್ರಮುಖ ಆಸ್ಪತ್ರೆ ಅನಿವಾರ್ಯವಾಗಿದೆ.  

ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಾಗೂ ತಾಲ್ಲೂಕಿನ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಸುಸಜ್ಜಿತ ಹೆರಿಗೆ ಆಸ್ಪತ್ರೆ ಆರಂಭಿಸುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಹಾಗೂ ಬಾಣಂತಿ ಸುಮಾ ಅವರ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಲಿದ್ದಾರೆ. 

Nagar Nitin to lead hunger strike tomorrow for well-equipped maternity hospital in Hosanagar; demand justice for Bananti Suma's death   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close