SUDDILIVE || SHIVAMOGGA
ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ಜುಲೈ 3ರಂದು ವಿದ್ಯುತ್ ವ್ಯತ್ಯಯ-Power outage in many areas of Shivamogga on July 3rd
ಶಿವಮೊಗ್ಗ, ಜು. 1: ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1ರ ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಜುಲೈ 3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೋಮಯ್ಯ ಲೇಔಟ್, ಟಿಜಿಎನ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಮೀನಾಕ್ಷಿ ಭವನ ರಸ್ತೆ, ಬಾಪೂಜಿಗರ, ಯಮಹ ಶೋರೂಮ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ನಿಗದಿತ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.
Power outage in many areas of Shivamogga on July 3rd
