ಹಾಲಿನ ದರ ಹೆಚ್ಚುವರಿ ಹಾಗೂ ಪ್ರೋತ್ಸಾಹ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ-Protest called for milk price hike and release of incentives

 SUDDILIVE || SHIVAMOGGA

ಹಾಲಿನ ದರ ಹೆಚ್ಚುವರಿ ಹಾಗೂ ಪ್ರೋತ್ಸಾಹ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ-Protest called for milk price hike and release of incentives    

Milk, protest

ಶಿವಮೊಗ್ಗ, ಜು. 4:
ಶಿವಮೊಗ್ಗ ಜಿಲ್ಲಾ ಹಾಲು ಉತ್ಪಾದಕರ ಹಿತರಕ್ಷಣಾ ವೇದಿಕೆ ವತಿಯಿಂದ ಹಾಲಿನ ದರ ಹೆಚ್ಚಳ ಮತ್ತು ಹಾಲು ಉತ್ಪಾದಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 7ರಿಂದ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಬಿಡುಗಡೆ ಮಾಡಿರುವ ಕರಪತ್ರದ ಪ್ರಕಾರ, ದಿನಾಂಕ 07.07.2026ರಂದು ರೈತ ಹಾಲು ಉತ್ಪಾದಕರ ಒಳತಿಗಾಗಿ ಪ್ರತಿ ಲೀಟರ್ ಹಾಲಿಗೆ ರೂ. 20 ಹೆಚ್ಚುವರಿ ಬೆಂಬಲ ಬೆಲೆ ಹಾಗೂ ಪ್ರೋತ್ಸಾಹ ಧನ 5 ರಿಂದ 10 ರೂ ಗಳಿಗೆ ಹೆಚ್ಚಿಸಿ ಘೋಷಣೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳಿಗಾಗಿ ನಡೆಸಲಾಗುವುದೆಂದು ತಿಳಿಸಲಾಗಿದೆ. 

ಹಾಲು ಉತ್ಪಾದಕರಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸುವುದು, ಹಾಲು ಖರೀದಿ ದರವನ್ನು ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಪರಿಷ್ಕರಿಸುವುದು, ಪಶು ಆಹಾರ, ಮೇವು ಹಾಗೂ ಪಶುವೈದ್ಯಕೀಯ ಸೇವೆಗಳನ್ನು ಕೈಗೆಟಕುವ ದರದಲ್ಲಿ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ.

ರಾಜ್ಯದಲ್ಲಿ ಸುಮಾರು 13.35 ಲಕ್ಷ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಹಾಗೂ ಲಕ್ಷಾಂತರ ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಉತ್ಪಾದನಾ ವೆಚ್ಚ ನಿರಂತರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹಾಲಿನ ಖರೀದಿ ದರವನ್ನು ಹೆಚ್ಚಿಸಬೇಕೆಂದು ವೇದಿಕೆ ಒತ್ತಾಯಿಸಿದೆ.

ಜುಲೈ 7ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಿಂದ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚಾಎರಿಯ ವರೆಗೆ ಮೆರವಣಿಗೆ ನಡೆಸಲಾಗಿದೆ. ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರಪತ್ರದಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲೆಯ ಹಾಲು ಉತ್ಪಾದಕರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವೇದಿಕೆ ಮನವಿ ಮಾಡಿದೆ.

Protest called for milk price hike and release of incentives    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close