ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ₹20 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ- Protest in Shivamogga for various demands including support price of ₹20 per liter for milk producers

SUDDILIVE || SHIVAMOGGA

ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ₹20 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ-  Protest in Shivamogga for various demands including support price of ₹20 per liter for milk producers  

Protest, producers

ಶಿವಮೊಗ್ಗ: ಹಾಲು ಉತ್ಪಾದಕರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಪ್ರತಿ ಲೀಟರ್ ಹಾಲಿಗೆ ₹20 ಹೆಚ್ಚುವರಿ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಪ್ರೋತ್ಸಾಹಧನವನ್ನು ₹10ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಹಾಲು ಉತ್ಪಾದಕರ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜುಲೈ 7ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಅಮೀರ್ ಅಹ್ಮದ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು 1,000ಕ್ಕೂ ಹೆಚ್ಚು ಹಾಲು ಉತ್ಪಾದಕರು ಹಾಗೂ ರೈತರು ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿದರು.

ಮನವಿಯಲ್ಲಿ ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಹಾಲು ಉತ್ಪಾದಕರು ದಿನಕ್ಕೆ 90 ಲಕ್ಷ ಲೀಟರ್‌ಗೂ ಅಧಿಕ ಹಾಲು ಉತ್ಪಾದಿಸುತ್ತಿದ್ದು, ಪಶು ಆಹಾರ ಸೇರಿದಂತೆ ಉತ್ಪಾದನಾ ವೆಚ್ಚಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಮುಖ ಬೇಡಿಕೆಗಳಲ್ಲಿ ಪ್ರತಿ ಲೀಟರ್ ಹಾಲಿಗೆ ₹20 ಹೆಚ್ಚುವರಿ ಬೆಂಬಲ ಬೆಲೆ, ಪ್ರೋತ್ಸಾಹಧನವನ್ನು ₹10ಕ್ಕೆ ಹೆಚ್ಚಿಸುವುದು ಹಾಗೂ ಬಾಕಿ ಪ್ರೋತ್ಸಾಹಧನ ಬಿಡುಗಡೆ, ಪಶು ಆಹಾರವನ್ನು ಕಡಿಮೆ ದರದಲ್ಲಿ ಪೂರೈಕೆ, ಪಶುಪಾಲನಾ ಸಾಮಗ್ರಿ ಮತ್ತು ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ವಿತರಣೆ, ಹಾಲು ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸರ್ಕಾರದಿಂದ ನಿಗದಿತ ವೇತನ, ಬಡ ರೈತರಿಗೆ ನೇರ ಸಾಲ ಯೋಜನೆಯಡಿ ಎರಡು ಹಸುಗಳ ವಿತರಣೆ, ಕೊಟ್ಟಿಗೆ ನಿರ್ಮಾಣಕ್ಕೆ ಸಹಾಯಧನ, ಸಂಘದ ಸಿಬ್ಬಂದಿಗೆ ಗುಣಮಟ್ಟದ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ನಿವೃತ್ತಿ ವೇತನವನ್ನು ₹5 ಲಕ್ಷಕ್ಕೆ ಏರಿಕೆ ಹಾಗೂ ಪಿಎಫ್ ಸೌಲಭ್ಯ, ಕಾರ್ಯದರ್ಶಿಗಳ ವೇತನ ಹೆಚ್ಚಳ, ಕಲ್ಯಾಣ ಟ್ರಸ್ಟ್‌ನ ಮರಣ ಪರಿಹಾರದಲ್ಲಿ ವಯೋಮಿತಿ ಸಡಿಲಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಮಂಡಿಸಲಾಗಿದೆ.

ಜಿಲ್ಲಾ ಹಾಲು ಉತ್ಪಾದಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು, ರೈತ ಮುಖಂಡರು, ಹಾಲು ಉತ್ಪಾದಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರವು ತಕ್ಷಣವೇ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

Protest in Shivamogga for various demands including support price of ₹20 per liter for milk producers  


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close