SUDDILIVE || SHIWAMOGGA
ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ 62 ಹುದ್ದೆಗಳ ನೇಮಕಾತಿ; ಆನ್‌ಲೈನ್ ಅರ್ಜಿ ಆಹ್ವಾನ- Recruitment for 62 posts in Shivamogga District Judicial Unit; Online applications invited
ಶಿವಮೊಗ್ಗ, ಜು.21: ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 06 ಪ್ರೋಸೆಸ್ ಜಾರಿಕಾರ (Process Server) ಹಾಗೂ 56 ಜವಾನ (Peon) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ಜಿ.ಎ. ಅವರು ಪ್ರಕಟಣೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್ 24ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ನೇಮಕಾತಿಗೆ ಸಂಬಂಧಿಸಿದ ಅರ್ಹತೆ, ವಯೋಮಿತಿ, ಮೀಸಲಾತಿ, ವೇತನ, ಆಯ್ಕೆ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಕಚೇರಿಯನ್ನು ದೂರವಾಣಿ: 08182-270321 ಮೂಲಕ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ನ್ಯಾಯಾಂಗ ಇಲಾಖೆಯು ಅಭ್ಯರ್ಥಿಗಳಿಗೆ ಮನವಿ ಮಾಡಿದೆ.
Recruitment for 62 posts in Shivamogga District Judicial Unit; Online applications invited
